ಬುಕ್ಕಾಪಟ್ಟಣ :
ಬುಕ್ಕಾಪಟ್ಟಣ ಗ್ರಾಮದಲ್ಲಿರುವ ಶ್ರೀ ಶನೇಶ್ವರಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹಾ ಶ್ರಾವಣ ಮಾಸದ ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸ್ವಾಮಿಯ ದೇವಸ್ಥಾನಕ್ಕೆ ಬುಕ್ಕಾಪಟ್ಟಣವಲ್ಲದೆ ಬೇರೆ ಬೇರೆ ಊರುಗಳಿಂದ ಬರುವಂತ ಭಕ್ತಾಧಿಗಳಿಗೆ ಅನುಕೂಲವಾಗಲೇಂದು ಹಾಗೂ ಶ್ರಾವಣ ಮಾಸದ ಅಂಗವಾಗಿ ಪ್ರತಿ ಶ್ರಾವಣ ಶನಿವಾರ ಶ್ರೀ ಶನೇಶ್ವರಸ್ವಾಮಿ ದೇವಸ್ಥಾನ ಅಭಿವೃದ್ದಿ ಮಂಡಳಿ ವತಿಯಿಂದ ದೇವರ ದರ್ಶನಕ್ಕೆ ಬರುವಂತ ಭಕ್ತಾಧಿಗಳಿಗೆ ವಿಶೇಷ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿದೆ.