ಮುಂಬೈ:
ಷೇರು ಮಾರುಕಟ್ಟೆ ವಿಷಯದಲ್ಲಿ ರಾಹುಲ್ ಗಾಂಧಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಪಿಯೂಷ್ ಗೋಯಲ್ ಆರೋಪ ಮಾಡಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ 4 ರಂದು ಷೇರು ಮಾರುಕಟ್ಟೆಯಲ್ಲಾದ ದೊಡ್ಡ ಕುಸಿತದ ಹಿಂದೆ ದೊಡ್ಡ ಹಗರಣದ ಕಾರಣವಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಇದರ ಬಗ್ಗೆ ಜಂಟಿ ಸದನ ತನಿಖೆ ನಡೆಯಬೇಕೆಂದು ಆಗ್ರಹಿಸಿದ್ದರು.
ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಪಿಯೂಷ್ ಗೋಯಲ್, ರಾಹುಲ್ ಗಾಂಧಿ ತಮ್ಮ ಆಧಾರ ರಹಿತ ಆರೋಪಗಳ ಮೂಲಕ ದೇಶದಲ್ಲಿರುವ ಹಾಗೂ ವಿದೇಶಿ ಹೂಡಿಕೆದಾರರಲ್ಲಿ ಭಯ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 3 ನೇ ಅವಧಿಗೆ ಅಧಿಕಾರ ವಹಿಸಿಕೊಳ್ಳುವುದು ಖಾತ್ರಿಯಾಗುತ್ತಿದ್ದಂತೆಯೇ ಮಾರುಕಟ್ಟೆ ಚೇತರಿಕೆ ಕಂಡಿದೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.
ರಾಹುಲ್ ಗಾಂಧಿ ಉಲ್ಲೇಖಿಸಿದ 30 ಲಕ್ಷ ಕೋಟಿ ರೂಪಾಯಿ ಮೊತ್ತ ರಾಷ್ಟ್ರೀಯ ಮೊತ್ತವಾಗಿದ್ದು ಟ್ರೇಡಿಂಗ್ ಗೆ ಸಂಬಂಧಿಸಿದ್ದಲ್ಲ ಎಂದು ಗೋಯಲ್ ಹೇಳಿದ್ದಾರೆ. ರಾಹುಲ್ ಗಾಂಧಿಗೆ ಅವರನ್ನು ಜನ ಯಾಕೆ ನಂಬುವುದಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಇಂತಹ ಕಾರಣಗಳಿಂದಾಗಿಯೇ ಜನ ರಾಹುಲ್ ಗಾಂಧಿಯನ್ನು ನಂಬುವುದಿಲ್ಲ, ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶೀಯ ಹೂಡಿಕೆದಾರರು ಹೆಚ್ಚಿನ ಲಾಭ ಗಳಿಸಿದ್ದಾರೆ ಎಂದು ಗೋಯಲ್ ಹೇಳಿದ್ದಾರೆ.
“ಕಾಂಗ್ರೆಸ್ ನಿರೀಕ್ಷೆಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವಾಗ ಮಾರುಕಟ್ಟೆ ಕುಸಿದಿರುವುದರಿಂದ ಹೂಡಿಕೆದಾರರ ಭಯದ ಬಗ್ಗೆ ರಾಹುಲ್ ಗಾಂಧಿ ಕಾಳಜಿ ವಹಿಸಬೇಕು ಎಂದು ನಾನು ಭಾವಿಸುತ್ತೇನೆ ಎಂದು ಗೋಯಲ್ ಹೇಳಿದ್ದಾರೆ.