ಸಂತ್ರಸ್ತರಿಗೆ ಕೇಂದ್ರದ ಕೊಡುಗೆ ಏನು? ಸಿದ್ದು ಪ್ರಶ್ನೆ

 ಮೈಸೂರು:

      ರಾಜ್ಯದಲ್ಲಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಕೊಡುಗೆ ಏನು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

      ಮೈಸೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಪ್ರದಾನಮಂತ್ರಿ ಪ್ರತಿನಿಧಿಯಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರು, ಸಂತ್ರಸ್ಥರ ಭೇಟಿ ಮಾಡಲು ಕೊಡಗಿಗೆ ಬಂದಾಗ ಏನಾದರೂ ಇದಕ್ಕೆ ಪರಿಹಾರ ನೀಡುತ್ತಾರೆ ಎಂದು ಕೊಂಡಿದ್ದೆ.ಆದರೆ, ಅವರು ನಯಾಪೈಸೆಯನ್ನು ಘೋಷಿಸಿಸದೆ ಸುಮ್ಮನೆ ಬಂದು ಹೋಗಿದ್ದಾರೆ. ಕೊಡಗು ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಮೇಲೆ ಸುಮ್ಮನೆ ಕೂಗಾಡಿದ್ದಾರೆ. ಇವರ ವರ್ತನೆಯನ್ನು ಖಂಡಿಸುವುದಾಗಿ ತಿಳಿಸಿದರು. ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಇವರು ಸಂತ್ರಸ್ತರ ನೆರವಿಗೆ ಪರಿಹಾರ ಘೋಷಿಸದೇ ಇರುವುದು ಅಸಮಧಾನ ಉಂಟು ಮಾಡಿದೆ ಎಂದು ಹೇಳಿದರು.

ಅಭಿವೃದ್ದಿ ಎನ್ನುವುದು ಮರೀಚಿಕೆ

    ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳ ಅವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ಮೈಸೂರಿನಲ್ಲಿ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ಸಾಕಷ್ಟು ಆಗಿವೆ. ಪ್ರಸಕ್ತ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವಲ್ಲಿ ಸಂದೇಹವೇ ಇಲ್ಲ ಎಂದು ಖಡಕ್ ಆಗಿ ಹೇಳಿದರು.

 

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ