ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿರುವ ಕೊಡಗಿನ ಸಂತ್ರಸ್ತರಿಗೆ ನೆರವು ನೀಡುವ ಸಲುವಾಗಿ ಬಿಜೆಪಿಯ ಶಾಸಕರು ತಮ್ಮ ಎರಡು ತಿಂಗಳ ವೇತನವನ್ನು ನೀಡಲು ನಿರ್ಧರಿಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ಬೆಂಗಳೂರು ವ್ಯಾಪ್ತಿಯ ಬಿಜೆಪಿ ಶಾಸಕರು ಮತ್ತು ಕಾರ್ಪೊರೆಟರ್‍ಗಳ ಎರಡು ತಿಂಗಳ ವೇತನವನ್ನು ನೀಡಲು ಮುಂದಾಗಿದ್ದಾರೆ ಎಂದ ಅವರು, ನಾಳೆ ಟ್ರಕ್ ಮೂಲಕ ಆಹಾರ ಸಾಮಾಗ್ರಿ ಕಳುಹಿಸುವುದಾಗಿ ಈ ಸಂದರ್ಭದಲ್ಲಿ ಹೇಳಿದರು.