ಸಂಪಾದಿಸಿದ ಸಂಪತ್ತಿನ ಒಂದು ಭಾಗವನ್ನು ಸಮಾಜದ ಹಿತಕ್ಕೆ ವ್ಯಯಮಾಡಿ

ತುಮಕೂರು:

              ಸಂಪಾದಿಸಿದ ಸಂಪತ್ತಿನ ಒಂದು ಭಾಗವನ್ನು ಸಮಾಜದ ಹಿತಕ್ಕೆ ವ್ಯಯಮಾಡಿದಾಗ ಮಾತ್ರ ಮಾನವ ಜನ್ಮ ಸಾರ್ಥಕ ಎಂದು ಹಿರಿಯ ಸಾಹಿತ ಡಾ.ಕವಿತಕೃಷ್ಣ ಅಭಿಪ್ರಾಯಪಟ್ಟರು.

                ನಗರದ ಕ್ಯಾತಸಂದ್ರದ ಕವಿತ ಕೃಷ್ಣ ಸಾಹಿತ್ಯ ಮಂದಿರದಲ್ಲಿ ಶ್ರೀ ಗೋಸಲ ಸೇವಾ ಟ್ರಸ್ಟ್ ವತಿಂಯಿಂದ ಆಯೋಜಿಸಿದ್ದ ಗೋಸಲ ಪ್ರಶಸ್ತಿ – 2018 ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ದುರಾಸೆ ಮಾನೋಭಾವನೆ ಬಿಟ್ಟು ಉಳ್ಳವರು ಇಲ್ಲದವರಿಗೆ ನೀಡುವ ಗುಣವನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು. ಎಲೆಮರೆಯ ಕಾಯಿಯಂತೆ ಸಮಾಜದಲ್ಲಿ ತಮ್ಮ ಶಕ್ತಾನೂಸಾರ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳನ್ನು ಸಂಸ್ಥೆಗಳು ಗುರುತಿಸಬೇಕು. ವಿದ್ಯಾರ್ಥಿಗಳು ಮಾನವಿಯ ಮೌಲ್ಯಗಳನ್ನು ಜೀವನದಲ್ಲಿ ಆಳವಡಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಿಸಬೇಕು ಎಂದರು.

               ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪುಟ್ಟಕಾಮಣ್ಣ ಮಾತನಾಡಿ, ಯುವ ಜನರು ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಜತೆಗೆ ಸಾಹಿತ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.

               ಶ್ರೀಗೋಸಲ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಬಿ.ರಂಗಸ್ವಾಮಿ ಮಾತನಾಡಿ, ಟ್ರಸ್ಟ್‍ವತಿಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಹಧನ ನೀಡಲಾಗುತ್ತಿದೆ ಹಾಗೂ ಗ್ರಾಮೀಣ ಭಾಗದಲ್ಲಿ ಆರೋಗ್ಯ ನೈರ್ಮಲ್ಯ, ಶಿಕ್ಷಣದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕುಟುಂಬಗಳು ಆರ್ಥಿಕ ಸ್ವಾವಲಂಭನೆಯಾಗಲು ಮತ್ತು ನಿರುದ್ಯೋಗ ನಿಗಿಸುವ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕುರಿತು ಹಲವು ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link