ಸಂಪುಟ ವಿಸ್ತರಣೆ ‘ನಾಳೆ‌ ಬಾ’ ಎಂಬಂತಿದೆ: ಬಿಜೆಪಿ ಶಾಸಕ ಅಭಯ ಪಾಟೀಲ ವ್ಯಂಗ್ಯ

ಬೆಳಗಾವಿ:

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೆಳಗಾವಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ವ್ಯಂಗ್ಯವಾಡಿದ್ದು, ‘ನಾಳೆ ಬಾ’ ಎಂಬಂತಿದೆ ಎಂದರು. ಇದೇ ವೇಳೆ, ಅದು ಆಗೋದಲ್ಲ, ಹೋಗೋದಲ್ಲ. ನನಗೆ ಮಂತ್ರಿ ಸ್ಥಾನ ಕೊಡೋದು, ಬಿಡೋದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದರು.

ಶಾಸಕ ಅಭಯ್ ಪಾಟೀಲ್‌ಗೆ ಸಿಎಂ ಬುಲಾವ್ ಅನ್ನೋದು ತಪ್ಪು. ಎಲ್ಲ ಶಾಸಕರಿಗೂ ಊಟಕ್ಕೆ ಕರೆದಿದ್ದರು. ಹೀಗಾಗಿ ಊಟ ಮಾಡಿ ಬಂದಿದ್ದೇವೆ. ಮೂರು ಸ್ವೀಟ್, ರೊಟ್ಟಿ ಜೊತೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದ ಊಟ ಇತ್ತು ಎಂದು ಸ್ಪಷ್ಟನೆ ಕೊಟ್ಟರು.
ನಮ್ಮ ಸರ್ಕಾರ ಬೆಳಗಾವಿ ಜಿಲ್ಲಾ ಕೇಂದ್ರಕ್ಕೆ ಅಭಿವೃದ್ಧಿ ವಿಷಯದಲ್ಲಿ ಪ್ರಾಮುಖ್ಯತೆ ನೀಡಿದೆ. ಇನ್ನು, ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಮ್ಮ ಗಮನಕ್ಕೆ ಬಂದಿಲ್ಲ. ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link