ಮೈಸೂರು:
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿಯಿರುವುದು ಸರಕಾರದ ಭದ್ರತೆಗೇ ಹೊರತು ಮುಖ್ಯ ಮಂತ್ರಿ ಬದಲಾವಣೆಗೆ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹೇಳಿದ್ದಾರೆ.
ಸಮನ್ವಯ ಸಮಿತಿಯಲ್ಲಿ ಸಿಎಂ ಬದಲಾವಣೆ ಮಾಡಬೇಕು ಎಂದು ತೀರ್ಮಾನವಾದರೇ ಸಿಎಂ ಬದಲಾಗಬಹುದು ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿಕೆಗೆ ಅವರು ಈ ರೀತಿ ಸ್ಪಷ್ಟನೆ ನೀಡಿದ್ದು, ಸಮಿತಿಯಲ್ಲಿ ಎರಡು ರಾಜಕೀಯ ಪಕ್ಷಗಳ ಅಭಿವೃದ್ದಿ ಯೋಜನೆಗಳ ಬಗ್ಗೆ ಚರ್ಚಿಸಿ ಅನುಷ್ಠಾನಗೊಳಿಸಲು ಸಮಿತಿ ಇದೆ ಎಂದಿದ್ದಾರೆ.
ಸಮನ್ವಯ ಸಮಿತಿಯು ಜೆಡಿಎಸ್ ಕಾಂಗ್ರೆಸ್ ಪಕ್ಷಗಳ ಬಂದೋಬಸ್ತ್ ಮಾಡಲು ಸೇರಬೇಕಿದೆ. ಅದಕ್ಕೆ ಸಿದ್ದರಾಮಯ್ಯ ಅವರ ಅನುಭವದ ಮಾರ್ಗದರ್ಶನ ಬೇಕಿದೆ ಎಂದು ಹೇಳಿದರು.
ಕೊಡಗಿನಲ್ಲಿ ಉಂಟಾಗಿರುವ ಪ್ರವಾಹ ಹಿನ್ನಲೆಯಲ್ಲಿ ಆದಷ್ಟು ಬೇಗ ಸಮನ್ವಯ ಸಮಿತಿ ಸಭೆ ಕರೆದು ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ತೀರ್ಮಾನಗೊಳ್ಳಬೇಕು. ಇದಲ್ಲದೇ ಒಂದು ಕಡೆ ಅತಿಯಾದ ಮಳೆ. ಮತ್ತೊಂದು ಕಡೆ ಮಳೆಯೇ ಇಲ್ಲ. ಹಾಗಾಗಿ ಎಲ್ಲಾ ಸಮಸ್ಯೆಗಳನ್ನು ತುರ್ತಾಗಿ ಪರಿಹಾರ ಮಾಡಬೇಕಿದೆ. ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ