ಹಿರಿಯೂರು :
ಸರ್ಕಾರವು ಸಮುದಾಯದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಜನರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ರಂಗನಾಥಪುರ ಗ್ರಾ.ಪಂ.ಅಧ್ಯಕ್ಷೆ ಬಿ.ಪುಷ್ಪಾಲತಾ ಓಬಳೇಶ್ ತಿಳಿಸಿದರು.
ತಾಲ್ಲೂಕಿನ ಉಪ್ಪಳಗೆರೆ ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಚಿತ್ರದುರ್ಗ ಹಾಗೂ ಅಕ್ಷರ ಸಾಂಸ್ಕೃತಿಕ ವಿಕಾಸ ಸಂಸ್ಥೆ ಮೊಳಕಾಲ್ಮೂರು ಇವರ ಸಹಯೋಗದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಕುರಿತು ಬೀದಿನಾಟಕ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದಲ್ಲಿ ಅನೇಕ ಜನಪರ ಕಾರ್ಯಕ್ರಮಗಳು ಇವೆ ಈ ಕಾರ್ಯಕ್ರಮಗಳು ಯಶಸ್ವಿಯಾಗಲು ಪ್ರಚಾರದ ಅವಶ್ಯಕತೆ ಇದ್ದು ಇಂತಹ ಕಾರ್ಯವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅತ್ಯುತ್ತಮ ಕಾರ್ಯ ಮಾಡುತ್ತಿದ್ದು ಸಾರ್ವಜನಿಕರು ಸರ್ಕಾರದ ಉದ್ದೇಶವನ್ನು ಅರ್ಥಮಾಡಿಕೊಂಡು ತಮ್ಮ ಅಭಿವೃದ್ಧಿ ಮಾಡಿಕೊಳ್ಳಬೇಕೆಂದರು.
ಗ್ರಾ.ಪಂ.ಸದಸ್ಯ ಮಹಲಿಂಗಪ್ಪ ಮಾತನಾಡಿ ರೈತರ ಬದುಕು ದುಸ್ತರವಾಗಿದೆ ಇಂದು ಜೀವನ ನಡೆಸಲು ಪರಿತಪಿಸುತ್ತಿರುವ ರೈತನ ಬದುಕಿಗೆ ಇಂತಹ ಜಾಗೃತಿ ಕಾರ್ಯಕ್ರಮಗಳ ಮೂಲಕ ಬದುಕಲು ಆತ್ಮಸ್ಥೈರ್ಯ ಮೂಡಿಸುವ ಕಾರ್ಯ ಮಾಡುತ್ತಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಾವಿದರ ಕಾರ್ಯ ಶ್ಲಾಘನೀಯ ಎಂದರು.
ಇದಕ್ಕೂ ಮುನ್ನ ರಂಗನಾಥ ಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರನಕಟ್ಟೆ ಗ್ರಾಮದಲ್ಲಿ ಬೀದಿ ನಾಟಕ ಜಾಗೃತಿ ಕಾರ್ಯಕ್ರಮ ಮಾಡಲಾಯಿತು ತಂಡದ ನಾಯಕ ಚಿನ್ನೋಬನಹಳ್ಳಿ ಮುರಾರ್ಜಿ, ಕಲಾವಿದರಾದ ಮಲ್ಲಪ್ಪನಹಳ್ಳಿ ಮಹಲಿಂಗಪ್ಪ, ಡಿ.ಗಂಗಪ್ಪ, ಸಿ.ಎಂ.ಬಾಬು , ಬಿ.ಗುರುಮೂರ್ತಿ, ಚೌಳೂರು ನಾಗರಾಜ್, ಸೋಮಶೇಖರ್, ಜಿ.ಕಮಲಮ್ಮ, ಎನ್.ದೇವಿರಮ್ಮ, ಡಿ.ಬಿ.ಪಂಪಣ್ಣ ಇತರರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
