ತುಮಕೂರು:
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲಿಸದು ಎಂದು ಉಪ-ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡುತ್ತಿದ್ದ ಅವರು, ಸರ್ಕಾರ ಅಸ್ಥಿರಗೊಳಿಸುವುದರಿಂದ ಅವರಿಗೆ ಯಾವುದೇ ರೀತಿಯ ಪ್ರಯೋಜನವಾಗದು, ಹೀಗಾಗಿ ಅವರೇನು ಬೇಕೋ ಮಾಡಿಕೊಳ್ಳಲಿ ಎಂದು ಅವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
