ಸರ್ಕಾರ ಕೆಡವಲು ಪ್ರಯತ್ನಿಸಿದರೆ, ಬಿಜೆಪಿ ವಿರುದ್ಧ ದಂಗೆ ಏಳಲು ಕರೆ ನೀಡುತ್ತೇನೆ

ಹಾಸನ: 

      ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಕೊಟ್ಟರೆ ನಾನು ಸುಮ್ಮನಿರುವುದಿಲ್ಲ. ಬಿಜೆಪಿ ವಿರುದ್ಧ ದಂಗೆ ಏಳುವಂತೆ ರಾಜ್ಯದ ಜನರಿಗೆ ಕರೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ, ಬಿ.ಎಸ್​.ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದರು.

      ಚನ್ನರಾಯಪಟ್ಟಣ ತಾಲೂಕು ತೋಟಿ ಗ್ರಾಮದಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಸರ್ಕಾರದ ವಿರುದ್ಧ ಬಿಜೆಪಿ ಹುಡುಗಾಟ ಆಡೋದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ, ಬಿಜೆಪಿ ವಿರುದ್ಧ ಧಂಗೆ ಎಳುವಂತೆ ನಾಡಿನ ಜನತೆಗೆ ಕರೆ ನೀಡುತ್ತೇವೆ ಎಂದಿದ್ದಾರೆ.

      ನಾನು ರೈತರಿಗೆ ಸ್ಪಂದಿಸಬೇಕು. ಅವರಿಗೆ ಆಸರೆಯಾಗಿ ನಿಲ್ಲಬೇಕು ಎಂದು ಬಯಸುತ್ತೇನೆ. ಆದರೆ, ದಿನ ಬೆಳಗಾದರೆ ಇವರ ಕೀಳುಮಟ್ಟದ ರಾಜಕಾರಣ ನೋಡುವುದೇ ಆಗಿದೆ ಎಂದು ವಾಗ್ದಾಳಿ ನಡೆಸಿದರು.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ