ದಾವಣಗೆರೆ:
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರವು ಹೆಚ್ಚು ದಿನ ಉಳಿಯಲ್ಲ ಎಂದು ಶಾಸಕ ಜಗದೀಶ್ಶಟ್ಟರ್ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡುತ್ತಿದ್ದ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ವ-ಪಶ್ಚಿಮ ದಿಕ್ಕಿನಂತಿದ್ದಾರೆ. ರಾಜ್ಯ ಸರ್ಕಾರವು ಶತಕ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು 100 ದಿನದ ಜಾಹೀರಾತು ನೀಡಿ ಸಂಭ್ರಮಿಸುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷವು ಮಾತ್ರ ಇದ್ಯಾವುದಕ್ಕೂ ಪ್ರತಿಕ್ರಿಯೆ ನೀಡದೆ ಸುಮ್ಮನಿದೆ ಎಂದರು.
ರೈತರ 45 ಸಾವಿರ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿರುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಆದರೆ, ಈ ಸಾಲ ಮನ್ನಾ ಮಾಡಿರುವ ಆದೇಶವನ್ನು ನೀಡದೆ, ಕೇವಲ ಬಾಯಲ್ಲಿ ಮಾತ್ರ ಸಾಲಮನ್ನಾ ಎಂದು ಹೇಳಿಕೊಂಡು ಬಂದರೆ ಸಾಕೆ? ಎಂದು ಸರ್ಕಾರವನ್ನು ಪ್ರಶ್ನಿಸಿದರು. ಈ ಸಾಲಮನ್ನಾ ಮಾಡಿರುವ ಬಗ್ಗೆ ಅಧಿಕೃತ ಆದೇಶ ನೀಡದಿರುವುದರಿಂದ ಜನರು ಗೊಂದಲದಲ್ಲಿದ್ದಾರೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ