ಬೆಂಗಳೂರು:
ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್ ಸರ್ಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನವೆಂಬರ್ 9ಕ್ಕೆ ನ್ಯಾಯಾಲಯ ಮುಂದೂಡಿದೆ.
ಕಬ್ಬನ್ ಪಾರ್ಕ್ ಪೊಲಿಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ದಾಖಲಿಸಿರುವ ಎಫ್ಐಆರ್ ರದ್ದು ಕುರಿತ ಅರ್ಜಿ ವಿಚಾರಣೆಯೂ ಹೈಕೋರ್ಟ್ನಲ್ಲಿ ನಡೆಯುತ್ತಿದೆ.
ಮೆಯೋಹಾಲ್ನ 22ನೇ ಸಿಟಿ ಸಿವಿಲ್ ಕೋರ್ಟ್ನಲ್ಲಿ ನಡೆಯಬೇಕಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆ ಮುಂದೂಡಿದ್ದು, ಸರ್ಜಾ ಪರ ವಕೀಲರು ಕಾಲಾವಕಾಶಕ್ಕೆ ಮನವಿ ಮಾಡಿದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ