ಶಿರಾ:
ಗ್ರಾಮೀಣ ರೈತರ ಬದುಕನ್ನು ಹಸನುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದು ಜನತೆಯ ಮನೆ ಬಾಗಿಲಿಗೆ ಈ ಯೋಜನೆಗಳನ್ನು ತಲುಪಿಸುವ ಉದ್ದೇಶ ಸರ್ಕಾರದ್ದು ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡ ಹೇಳಿದರು.
ತಾಲೂಕಿನ ಲಕ್ಷಿ ಸಾಗರ ಗ್ರಾಮದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರಸಕ್ತ ಬಜೆಟ್‌ನಲ್ಲಿ ಸರ್ಕಾರವು ಅನೇಕ ರೈತ ಪರ ಯೋಜನೆಗಳಿಗೆ ಹಣವನ್ನು ಮೀಸಲಿಟ್ಟಿದ್ದು ಡಬಲ್ ಇಂಜಿನ್ ಸರ್ಕಾರಗಳು ರೈತ ಪರವಾಗಿದ್ದು ಗ್ರಾಮೀಣ ರೈತರ ಬದುಕು ಹಸನಾಗಲಿದೆ. ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ರೈತರು ಮುಂದಾಗಬೇಕು ಎಂದರು.
ಗ್ರಾ.ಪಂ. ವ್ಯಾಪ್ತಿಯಲ್ಲಿ ಸಿ.ಸಿ. ರಸ್ತೆಗಳು, ಚರಂಡಿ ನಿರ್ಮಾಣ, ಶಾಲಾ ಕಟ್ಟಡಗಳಂತಹ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕರು ತಿಳಿಸಿದರು. ಇದೇ ಸಂದರ್ಬದಲ್ಲಿ ಸಂದ್ಯಾ ಸುರಕ್ಷಾ, ಪಿಂಚಣಿ ಯೋಜನೆ, ಸಾಗುವಳಿ ಪತ್ರ, ವಿಧವಾ ವೇತನ ಸೇರಿದಂತೆ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಆದೇಶ ಪ್ರತಿಗಳ ವಿತರಣೆ ಮಾಡಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
