ಬೆಂಗಳೂರು:
ಅತಿಯಾದ ನೆರೆಯಿಂದ ಜರ್ಜರಿತಗೊಂಡಿರುವ ಕೊಡಗು ಜಿಲ್ಲೆಯಲ್ಲಿ ಸಂತ್ರಸ್ತರ ಪುನರ್ ವಸತಿ ಹಾಗೂ ಪರಿಹಾರ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯಲ್ಲಿ ಜನ ಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಭೂಕುಸಿತದಿಂದ ಮನೆಕಳೆದುಕೊಂಡವರು ಹೊಸ ಜೀವನ ಕಟ್ಟಿಕೊಳ್ಳಲು ಸರ್ಕಾರದ ಮೊರೆ ಹೋಗಿದ್ದಾರೆ. ಅತಿಯಾದ ನೆರೆಯಿಂದ ಸುಮಾರು 17 ಮಂದಿ ಸಾವನ್ನಪ್ಪಿದ್ದು, 9 ಮಂದಿ ಕಾಣೆಯಾಗಿದ್ದಾರೆ, 2200ಕ್ಕೂ ಅಧಿಕ ಮನೆಗಳು ಸಂಪೂರ್ಣ ಹಾನಿಯಾಗಿವೆ.5 ಸಾವಿರಕ್ಕೂ ಅಧಿಕ ಮಂದಿ 51 ಪುನರ್ ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದು, ಇದರಲ್ಲಿ ಕೆಲವರು ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಂತ್ರಸ್ತರ ಪರಿಹಾರ ಕೇಂದ್ರಗಳ ಸಂಖ್ಯೆ 35ಕ್ಕೆ ಇಳಿದಿದೆ.
ಸೇನಾ ಪಡೆ ಹಾಗೂ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ಮತ್ತು ನಾಗರಿಕ ಪೆÇೀಲಿಸ್ ಸಿಬ್ಬಂದಿ, ಭಾರಿ ಯಂತ್ರಗಳ ನೆರವಿನಿಂದ ರಸ್ತೆಗಳನ್ನು ತೆರಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುಡ್ಡಗಾಡು ಪ್ರದೇಶದಲ್ಲಿ ಹಾನಿಯಾಗಿರುವ ಕಾಫಿ, ಅಡಿಕೆ, ಸಾಂಭಾರು ಪಧಾರ್ಥಗಳ ನಷ್ಟಕ್ಕೆ ಬಾರೀ ಪ್ರಮಾಣದ ಪರಿಹಾರ ಧನವನ್ನು ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.








