ತುಮಕೂರು:
ನಗರದ ಎಂಪ್ರೆಸ್ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೆ.8 ರಂದು ಬೆಳಗ್ಗೆ 10 ಗಂಟೆಗೆ 2018-19ನೇ ಶೈಕ್ಷಣಿಕ ವರ್ಷದ ಸಾಂಸ್ಕತಿಕ, ಕ್ರೀಡಾ, ಎನ್.ಎಸ್.ಎಸ್. ರೊವರ್ ಮತ್ತು ರೇಂಜರ್ ಘಟಕಗಳ ಉದ್ಘಾಟನೆ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂ ಏರ್ಪಡಿಸಲಾಗಿದೆ.
ಅಧ್ಯಕ್ಷತೆಯನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಎಸ್.ಪಿ.ಮುದ್ದಹುಮೇಗೌಡ ನೆರವೇರಿಸುವರು. ಪ್ರತಿಭಾ ಪುರಸ್ಕಾರವನ್ನು ಪ.ಪೂ. ಶಿಕ್ಷಣ ಇಲಾಖೆ ಪ್ರಭಾರಿ ಉಪನಿರ್ದೇಶಕರಾದ ಎಸ್.ನಾಗರತ್ನ ನೀಡುವರು. ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎನ್.ಎಸ್.ಜಯಕುಮಾರ್ ಹಾಗೂ ಸಿಐಟಿ ಕಾಲೇಜಿನ ಪ್ರಾಚಾರ್ಯರಾದ ಎಸ್.ಸುರೇಶ್, ವಿಶ್ರಾಂತ ಪ್ರಾಚಾರ್ಯ ಜಿ.ಎಚ್.ಮಹದೇವಪ್ಪ ಅವರುಗಳು ಭಾಗವಹಿಸುವರು.







