ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪತ್ರ : ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು

ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬರೆದಿದ್ದಾರೆ ಎನ್ನಲಾಗಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೀ ಸಿದ್ದರಾಮಯ್ಯ ಅವರು  ಅದು ನಕಲಿ ಪತ್ರವಾಗಿದ್ದು ಆ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತಾಗಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ.ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದಿದ್ದಾರೆ.

Recent Articles

spot_img

Related Stories

Share via
Copy link