ಸಾರ್ಥಕ ಬದುಕಿನ ಪರ್ವ ಆರಂಭವಾಗುವುದೇ ಸರ್ಕಾರಿ ಶಾಲೆಗಳಿಂದ

ಚಳ್ಳಕೆರೆ

    ಗ್ರಾಮೀಣ ಭಾಗದ ಲಕ್ಷಾಂತರ ವಿದ್ಯಾರ್ಥಿಗಳ ಉದ್ಯೋಗದ ಕನಸು ನನಸು ಮಾಡಿ ಅವರ ಭವಿಷ್ಯದ ಬದುಕನ್ನು ಸದೃಢಪಡಿಸುವ ಶಕ್ತಿ ಸರ್ಕಾರಿ ಶಾಲೆಗಳಿಗೆ ಮಾತ್ರ ಇದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರು, ಇಂದು ಪ್ರತಿಷ್ಠಿತ ಉದ್ಯೋಗದಲ್ಲಿ ಇದ್ಧಾರೆ. ಸರ್ಕಾರಿ ಶಾಲೆಗಳಿಂದ ಮಾತ್ರ ಬಡ ವಿದ್ಯಾರ್ಥಿಗಳು ಅಭಿವೃದ್ಧಿ ಹೊಂದಲು ಸಾಧ್ಯ. ಹೆಚ್ಚಿನ ಸರ್ಕಾರಿ ಉದ್ಯೋಗಗಳು ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಪಾಲಾಗುತ್ತದೆ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.

    ಅವರು, ಬುಧವಾರ ಸಂಜೆ ಇಲ್ಲಿನ ಬಿಎಂ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾಪುರಸ್ಕಾರ, ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ತಾಲ್ಲೂಕಿನಲ್ಲಿಯೇ ಪುರಾತನವಾದ ಇತಿಹಾಸವನ್ನು ವಿಶೇಷ ವೈಶಿಷ್ಟ್ಯತೆಯನ್ನು ಹೊಂದಿರುವ ಬಿಎಂ ಸರ್ಕಾರಿ ಪ್ರೌಢಶಾಲೆ ತನ್ನ ಪ್ಲಾಟಿನಂ ಜುಬ್ಲಿ ವರ್ಷ ಆಚರಣೆಗೆ ಸಿದ್ದತೆ ನಡೆಸಿದೆ. ಈ ಶಾಲೆಯಲ್ಲಿ ಕಲಿತ ಲಕ್ಷಾಂತರ ವಿದ್ಯಾರ್ಥಿಗಳು ನೆಮ್ಮದಿಯ ಬದುಕನ್ನು ಸಾಗಿಸುತ್ತಿದ್ದಾರೆ. ಸುಮಾರು 5 ಕೋಟಿವೆಚ್ಚದಲ್ಲಿ ಶಾಲೆಯ ನವನಿರ್ಮಾಣಕ್ಕೆ ಯೋಜನೆ ಸಿದ್ದಪಡಿಸಲಾಗಿತ್ತು. ಆದರೆ, ಕಾರಣಾಂತರದಿಂದ ಮುಂದೂಡಲಾಗಿದೆ ಎಂದರು. ಫಲಿತಾಂಶದಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಲು ಶಿಕ್ಷಕರಿಗೆ ಸೂಚಿಸಿದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯ ಸಂಪತ್‍ಕುಮಾರ್, ಕಳೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.ಸ85ರಷ್ಟು ಫಲಿತಾಂಶವನ್ನು ನಮ್ಮ ಶಾಲೆ ಹೊಂದಿದೆ. ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಮುನ್ನಡೆ ಸಾಧಿಸಲು ಅನುಕೂಲವಾಗುವಂತೆ ಎಲ್ಲಾ ಶಿಕ್ಷಕರು ಸಕರಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ಧಾರೆ. ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಪ್ರತಿಯೊಂದು ವಿಷಯದ ಶಿಕ್ಷಕರು ಸಹ ವಿಶೇಷ ತರಗತಿಗಳನ್ನು ಹಮ್ಮಿಕೊಂಡಿದ್ಧಾರೆಂದರು. ಇದೇ ಸಂದರ್ಭದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸುತ್ತಲ್ಲದೆ, ಈ ಶಾಲೆಯ ನಿವೃತ್ತ ಶಿಕ್ಷಕಿ ಬಿ.ರೇಣುಕಮ್ಮರವರನ್ನು ಸಹ ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾರಾಮಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್, ನಗರಸಭಾ ಸದಸ್ಯರಾದ ರಮೇಶ್‍ಗೌಡ, ಮಲ್ಲಿಕಾರ್ಜುನ, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಗಿರಿಯಪ್ಪ, ಸದಸ್ಯ ಜಿ.ವೀರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶಪ್ಪ, ಹಿರಿಯ ಶಿಕ್ಷಕ ಈ.ಕರಿಯಣ್ಣ, ಎನ್.ವೈ.ಪುಪ್ಪಲತಾ, ಟಿ.ಓಬಣ್ಣ, ಕೆ.ಎಂ.ಮಲ್ಲಿಕಾರ್ಜುನ, ರೇವಣ್ಣ ಮುಂತಾದವರು ಉಪಸ್ಥಿತರಿದ್ದರು

                      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap