ಸಾರ್ವಜನಿಕ ಸಂಪರ್ಕ ಸಭೆ

ಗುಬ್ಬಿ

               ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ದೂರುಗಳನ್ನು ಸ್ವೀಕರಿಸಲು ಆ.23 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸಾರ್ವಜನಿಕ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ವಿವಿಧ ಇಲಾಖೆಗಳಲ್ಲಿ ತಮ್ಮ ಕೆಲಸ ಕಾರ್ಯಗಳು ವಿಳಂಬವಾಗಿದ್ದಲ್ಲಿ ಅಥವಾ ಲಂಚಕ್ಕಾಗಿ ವಿಳಂಬ ಮಾಡುತ್ತಿದ್ದರೆ ಅಂತಹ ಸಮಸ್ಯೆಗಳನ್ನು ಸಭೆಯಲ್ಲಿ ತಿಳಿಸಿದರೆ ತಮ್ಮ ಕೆಲಸಗಳನ್ನು ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ ತ್ವರಿತವಾಗಿ ಇತ್ಯರ್ಥಪಡಿಸಲಾಗುವುದು. ಸಾರ್ವಜನಿಕರು ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ-0816-2255522, 9489896221 ಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.

Recent Articles

spot_img

Related Stories

Share via
Copy link