ದಾವಣಗೆರೆ:
ಸಾಲದ ಭಾದೆ ತಾಳಲಾರದೇ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಗಳೂರು ತಾಲೂಕಿನ ಚದುರಗೊಳ್ಳ ಗ್ರಾಮದಲ್ಲಿ ಗುರುವಾರ ನಡೆದಿದೆ.
ಕಲ್ಲೇಶ್ವರಪ್ಪ ಮೃತ ವ್ಯಕ್ತಿಯಾಗಿದ್ದು, ಈತ ಮನೆ ನಿರ್ಮಾಣ ಹಾಗೂ ಕೃಷಿ ಉದ್ದೇಶಕ್ಕಾಗಿ ಖಾಸಗಿ ವ್ಯಕ್ತಿಗಳಿಂದ ಸುಮಾರು ಮೂರ್ನಾಲ್ಕು ಲಕ್ಷ ರೂ. ಕೈಗಡ ಸಾಲ ಮಾಡಿದ್ದ. ಆದರೆ, ಹಾಕಿದ ಬೆಳೆ ಸರಿಯಾಗಿ ಬರಲಿಲ್ಲ. ಸಾಲ ತೀರಿಸುವುದು ಹೇಗೆ ಎಂಬುದಾಗಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಗುರವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಬಿಳಿಚೊಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ