ಬೆಂಗಳೂರು :
2021 ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಕೊರೋನಾ ಸೋಂಕಿನ ಕಾರಣದಿಂದಾಗಿ ಮುಂದೂಡಿಕೆ ಮಾಡಲಾಗಿದೆ.
ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2021ನೇ ಸಾಲಿನ ವಾರ್ಷಿಕ ದ್ವಿತೀಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲ್ಪಟ್ಟಿದ್ದರಿಂದ ಹಾಗೂ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಪರಿಗಣಿಸಿ, ದಿನಾಂಕ 01-07-2021 ಮತ್ತು 08-07-2021ರಂದು ನಡೆಸಲು ನಿಗದಿಪಡಿಸಿದ್ದ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮತ್ತು 09-07-2021ರಂದು ನಡೆಸಬೇಕಾಗಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದೆ.
2021 ನೇ ಸಾಲಿನ CET ಪರೀಕ್ಷೆಯನ್ನು ದಿನಾಂಕ 28-08-2021 ಮತ್ತು 29-08-2021ರಂದು ಮತ್ತು ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ 30-08-2021ರಂದು ನಡೆಸಲಾಗುವುದು. ಸದ್ಯದಲ್ಲಿಯೇ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
