ಸಿದ್ದರಾಮಯ್ಯ ಪ್ರಮಾಣ ವಚನ : ಪಿಣರಾಯಿ ವಿಜಯನ್‌ ಗಿಲ್ಲ ಆಹ್ವಾನ

ನವದೆಹಲಿ: 

     ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಸಮಾರಂಭಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಕಾಂಗ್ರೆಸ್ ಆಹ್ವಾನಿಸಿಲ್ಲ. ಕಾಂಗ್ರೆಸ್ ನ ಈ ಕ್ರಮ ಅಪಕ್ವ ರಾಜಕೀಯ ಮತ್ತು ದೌರ್ಬಲ್ಯವನ್ನು ತೋರಿಸುತ್ತದೆ ಎಂದು ಆಡಳಿತಾರೂಢ ಎಲ್‌ಡಿಎಫ್ ಶುಕ್ರವಾರ ಟೀಕಿಸಿದೆ.

     ನೆರೆಯ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೇರಿದಂತೆ ಇತರರಿಗೆ ಆಹ್ವಾನ ನೀಡಲಾಗಿದ್ದು, ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಕೇರಳ ಸಿಎಂಗೆ ಆಹ್ವಾನ ನೀಡದಿರುವುದು ಬಿಜೆಪಿಯ “ಫ್ಯಾಸಿಸ್ಟ್” ರಾಜಕೀಯದ ವಿರುದ್ಧ ದೇಶದ ಜಾತ್ಯತೀತ ಪ್ರಜಾಸತ್ತಾತ್ಮಕ ಶಕ್ತಿಗಳನ್ನು ಒಗ್ಗೂಡಿಸುವ ಧ್ಯೇಯ ಸಾಧಿಸಲು ಸಾಧ್ಯವಿಲ್ಲ ಎಂದು ಎಲ್‌ಡಿಎಫ್ ಸಂಚಾಲಕ ಇ ಪಿ ಜಯರಾಜನ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap