ಸಿದ್ದು-ರಾಹುಲ್ ಭೇಟಿ : ರಾಜಕೀಯ ಬೆಳವಣಿಗೆಗಳ ಕುರಿತು ಮಾತುಕತೆ

ನವದೆಹಲಿ:

Image result for siddaramaiah rahul

      ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಲಿದ್ದು, ರಾಜ್ಯದ ರಾಜಕೀಯ ಬೆಳವಣಿಗೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

      ಸಮ್ಮಿಶ್ರ ಸರ್ಕಾರದ ವಿರುದ್ಧ ಜಾರಕಿಹೊಳಿ ಸಹೋದರರು ಬಂಡಾಯ ಎದ್ದಿರುವುದು, ಸಿದ್ದರಾಮಯ್ಯ ಅವರ ಸಂಧಾನವೂ ವಿಫಲವಾಗಿದ್ದು ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಕಳೆದ ಒಂದು ವಾರಗಳಲ್ಲಿ ನಡೆದ ಎಲ್ಲಾ ನಾಟಕೀಯ ಬೆಳವಣಿಗೆಯ ಬಗ್ಗೆಯೂ ರಾಹುಲ್ ಗಾಂಧಿ ಅವರೊಂದಿಗೆ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ.

     ಈ ಹಿಂದೆ ವಿದೇಶ ಪ್ರವಾಸದಿಂದ ಸಿದ್ದರಾಮಯ್ಯ ವಾಪಸ್ ಆದ ಬಳಿಕ (ಸೆ.16) ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರು ಭೇಟಿಯಾದ ಸಂದರ್ಭದಲ್ಲಿ ರಾಹುಲ್ ಭೇಟಿಗೆ ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಭೇಟಿ ನಡೆಯುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 
 

Recent Articles

spot_img

Related Stories

Share via
Copy link