ಬೆಂಗಳೂರು:
ಸದ್ಯದಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸದಲ್ಲಿದ್ದು, ಅವರು ವಾಪಸ್ಸಾದ ನಂತರ ಯಾರನ್ನು ಮಂತ್ರಿ ಮಾಡಬೇಕು, ಯಾವ ಸಮುದಾಯಕ್ಕೆ ಆಧ್ಯತೆ ನೀಡಬೇಕು ಎಂದು ನಿರ್ಧರಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವು ಸುಭದ್ರವಾಗಿದೆ. ಪಕ್ಷದಲ್ಲಿ ಆಂತರಿಕವಾಗಿ ಗಂಭೀರ ಸಮಸ್ಯೆ ಏನೂ ಇಲ್ಲ. ಕೆಲ ಕ್ಷೇತ್ರಗಳಲ್ಲಿ ಇದ್ದ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಲಾಗಿದೆ, ಸಚಿವ ಡಿ.ಕೆ.ಶಿವಕುಮಾರ್ ಅವರು ಬೆಳಗಾವಿಗೆ ಹೋದರೆ, ಅದಕ್ಕೆ ನಾವು ಆಶ್ಚರ್ಯ ಪಡಬೇಕಾಗಿಲ್ಲ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ