ಬೆಂಗಳೂರು:
ವೈದ್ಯಕೀಯ ಹಾಗೂ ಮತ್ತಿತರ ವೃತ್ತಿಪರ ಕೋರ್ಸ್ಗಳ ಸೀಟು ಹಂಚಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದೇಶಕ್ಕೆ ಮಾದರಿಯಾಗುವಂತೆ ನಡೆಸಿದೆ. ಪಾರದರ್ಶಕವಾಗಿ ಸೀಟು ಹಂಚಿಕೆ ಮಾಡಲಾಗಿದೆ ಎಂದು ವೈದ್ಯಕೀಯ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸೀಟು ಹಂಚಿಕೆಯ ಕೌನ್ಸೆಲಿಂಗ್ ಪ್ರಕ್ರಿಯೆ ನಡೆದಿರುವ ಸಿಇಟಿ ಕಚೇರಿಗೆ ಇಂದು ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಟು ಹಂಚಿಕೆಯಲ್ಲಿ ಯಾವುದೇ ಅಕ್ರಮಗಳು ನಡೆದಿಲ್ಲ. ಅತ್ಯಂತ ಪಾರದರ್ಶಕವಾಗಿ ಸೀಟು ಹಂಚಿಕೆಯಾಗಬೇಕಾಗಿದೆ ಎಂದಿದ್ದಾರೆ.
ಕಾನೂನಿನ ಅಡಿಯಲ್ಲಿ ಒಂದು ಸೀಟಿಗೂ ಸಹ ಲೋಪವಾಗದಂತೆ ಸೀಟು ಹಂಚಿಕೆ ನಡೆದಿದೆ. ಮಹಾರಾಷ್ಟ್ರ, ತಮಿಳುನಾಡು, ಕೇರಳ ರಾಜ್ಯಗಳು ನಮ್ಮನ್ನು ನೋಡಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಿವೆ ಎಂದರು.
ಮಾನ್ಯತೆ ರದ್ದಾಗಿರುವ ನಾಲ್ಕು ವೈದ್ಯಕೀಯ ಕಾಲೇಜುಗಳಾದ ಆಕ್ಸಫರ್ಡ್, ಸಂಭ್ರಮ್, ಶ್ರೀದೇವಿ ಮತ್ತು ಆಕಾಶ್ ಈ ಕಾಲೇಜುಗಳು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿವೆ. ಸುಪ್ರೀಂ ಕೋರ್ಟ್ ಅನುಮತಿ ನೀಡಿದರೆ ಈ ಕಾಲೇಜುಗಳ ಸೀಟಿಗೂ ಕೌನ್ಸೆಲಿಂಗ್ ನಡೆಸಲಾಗುವುದು ಎಂದರು.
ಕೇರಳ ಹಾಗೂ ಮಡಿಕೇರಿಯಲ್ಲಿ ಪ್ರವಾಹದಿಂದ ವಿದ್ಯಾರ್ಥಿಗಳು ಕೌನ್ಸೆಲಿಂಗ್ಗೆ ತಡವಾಗಿ ಬಂದ ಹಿನ್ನೆಲೆಯಲ್ಲಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲು ಸಾಧ್ಯವಿಲ್ಲ. ಸರ್ಕಾರ ಮಧ್ಯೆ ಪ್ರವೇಶ ಮಾಡುವುದಿಲ್ಲ. ಇದು ಅವರ ವೈಯಕ್ತಿಕ ಸಮಸ್ಯೆ ಎಂದರು.
ಶುಲ್ಕ ಏರಿಕೆ: ಸಮರ್ಥನೆ ಸರ್ಕಾರಿ ಮೆಡಿಕಲ್ ಕಾಲೇಜುಗಳ ಶುಲ್ಕ ಏರಿಕೆಯನ್ನು ಸಮರ್ಥಿಸಿಕೊಂಡ ಅವರು, ಯುಕೆಜಿ, ಎಲ್ಕೆಜಿಗೆ 50 ಸಾವಿರ, ಲಕ್ಷ ಕೊಟ್ಟು ಶಾಲೆಗೆ ಕಳುಹಿಸುತ್ತಾರೆ.
ಮೆಡಿಕಲ್ ಸೇರುವವರಿಗೆ ಶುಲ್ಕ ಇರಬೇಡವೇ, ಡಾಕ್ಟರ್ ಆದ ಬಳಿಕ ಸಂಬಳ ಎಷ್ಟು ಬರುತ್ತದೆ ಗೊತ್ತಾ ಎಂದು ಅವರು ಮಾಧ್ಯಮ ಪ್ರತಿನಿಧಿಗಳನ್ನೇ ಪ್ರಶ್ನಿಸಿದರು. ಮಾಹಿತಿ ಪಡೆದ ಸಚಿವರು ಇದಕ್ಕೂ ಮೊದಲು ಇಂದು ಬೆಳಿಗ್ಗೆಯೇ ಸಚಿವ ಡಿ.ಕೆ, ಶಿವಕುಮಾರ್ ಸಿಇಟಿ ಕೇಂದ್ರಕ್ಕೆ ಭೇಟಿ ನೀಡಿ ಕೌನ್ಸೆಲಿಂಗ್ಗೆ ಬಂದ ವಿದ್ಯಾರ್ಥಿಗಳು ಮತ್ತು ಪೆÇೀಷಕರ ಜತೆ ಚರ್ಚೆ ನಡೆಸಿದರು. ಕೌನ್ಸೆಲಿಂಗ್ ಬಗ್ಗೆ ಸಚಿವರು ಮಾಹಿತಿಯನ್ನು ಪಡೆದುಕೊಂಡರು.
ಕೌನ್ಸೆಲಿಂಗ್ನಲ್ಲಿ ಅಕ್ರಮಗಳು ನಡೆಯುತ್ತವೆ ಎಂಬ ದೂರಿನ ಹಿನ್ನೆಲೆಯಲ್ಲಿ ಸಚಿವರು ದಿಢೀರ್ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮಂಜಳಾ ಉಪಸ್ಥಿತರಿದ್ದರು.








