ಕೂಡ್ಲಿಗಿ:
ದೇಶದ ಸ್ವಾತಂತ್ರ್ಯಕ್ಕೆ ಅರ್ಥ ಬರಬೇಕಾದರೆ ಪ್ರತಿಯೊಬ್ಬರಿಗೆ ಉತ್ತಮ ಶಿಕ್ಷಣ ಸಿಗಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು. ಅವರು ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಬುಧವಾರ ತಾಲ್ಲೂಕು ಆಡಳಿತ ಏರ್ಪಡಿಸಿದ್ದ 72ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಮ್ಮ ಹಿರಿಯರ ದ್ಯೇಯೋದ್ದೇಶಗಳನ್ನು ಈಡೇರಿಸಬೇಕಾದರೆ ನಾವು ನಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ನೀಡಲು ಶಾಸಕರ ಅನುದಾನದಲ್ಲಿ ಪ್ರತಿ ವರ್ಷ ಶೇ 25ರಷ್ಟು ಮೀಸಡಲಾಗುವುದು. ಈಗಾಗಲೇ ನರೇಗಾ ಯೋಜನೆಯಲ್ಲಿ ಕ್ಷೇತ್ರ ಎಲ್ಲಾ ಶಾಲೆಗಳಿಗೆ ಕಂಪೌಂಡ್ ನಿರ್ಮಾಣ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಕ್ಷೇತ್ರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದ್ದು, ಸಿಂಗಟಲೂರು ಏತ ನೀರವರಿ ಹಿನ್ನೀರಿನಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿ ಮಾಡಲು ಈಗಾಗಲೇ ಸಮೀಕ್ಷೆ ನಡೆಸಲಾಗುತ್ತಿದ್ದು, ಇದಕ್ಕಾಗಿ 80 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೆ ಪಟ್ಟಣದಲ್ಲಿ 10 ಕೋಟಿ ವೆಚ್ಚದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಈ ತಿಂಗಳ ಅಂತ್ಯದಲ್ಲಿ ಶಂಕು ಸ್ಥಾಪನೆ ಮಾಡಲಾಗುವುದು. ಇದರೊಂದಿಗೆ 10 ಕೋಟಿ ವೆಚ್ಚದಲ್ಲಿ ನೂತನ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲಾಗುವುದು. ಎಲ್ಲಾ ಯೋಜನೆಗಳನ್ನು ಇನ್ನೆರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಕ್ಷೇತ್ರದಲ್ಲಿನ 217 ಹಳ್ಳಿಗಳಿಗೆ ಕುಡಿಯುವ ನೀನ ಪೂರೈಕೆ ಮಾಡಲು ಹಾಗೂ ವಿದ್ಯುತ್ ಸಮಸ್ಯೆ ನೀಗಿಸಲು ಯೋಜನಗಳು ಸಿದ್ದವಾಗಿವೆ ಎಂದರು.
ಣ ತಹಶೀಲ್ದಾರ್ ಎಲ್. ಕೃಷ್ಣಮೂರ್ತಿ ದ್ವಜಾರೋಹಣ ನಡೆಸಿದರು. ಇದಕ್ಕೂ ಮುನ್ನ ಗಾಂಧಿ ಚಿತಾಭಸ್ಮ ಸ್ಮಾರಕಕ್ಕೆ ಹೂ ಮಾಲೆ ಆರ್ಪಿಸಿ ನಮನ ಸಲ್ಲಿಸಿದರು.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಬಿ. ವಂಕಟೇಶ್ ನಾಯ್ಕ್, ಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಬಸಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಕೆಇಬಿ ಬಸವರಾಜ, ಸದಸ್ಯ ಚಿನ್ನಾಪ್ರಪ್ಪ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಪಿ. ರಜನಿಕಾಂತ್, ಎಪಿಎಂಸಿ ಉಪಾಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ, ಡಿವೈಎಸ್ಪಿ ಬಸವೇಶ್ವರ, ಬ್ಯಾಳಿ ವಿಜಯಕುಮಾರ, ಮಂಜುನಾಥ, ಟಿ.ಜಿ. ಮಲ್ಲಿಕಾರ್ಜುನಗೌಡ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು. ಇದೇ ಸಂದಭದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಳಿಗೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ನಂತರ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.