ತಿಂಗಳಾಂತ್ಯಕ್ಕೆ ಸೆಂಟ್ರಲ್‌ ವಿಸ್ತ ಲೋಕಾರ್ಪಣೆ…!

ನವದೆಹಲಿ: 

      ಸಿವಿಲ್ ಕಟ್ಟಡಗಳ ಸ್ವಚ್ಛತೆ ಪ್ರಾರಂಭವಾಗಿದೆ ಮತ್ತು ಹೊಸ ಕಟ್ಟಡದ ಉದ್ಘಾಟನೆಯ ಬಗ್ಗೆ ಇನ್ನೂ ಸರ್ಕಾರದಿಂದ ಯಾವುದೇ ಮಾಹಿತಿ ಇಲ್ಲ. ಎರಡು ವರ್ಷಗಳ ಹಿಂದೆ ನೂತನ ಸಂಸತ್ ಭವನದ ನಿರ್ಮಾಣ ಕಾರ್ಯ ಆರಂಭವಾಗಿತ್ತು ಇದೇ ತಿಂಗಳಾಂತ್ಯಕ್ಕೆ ಲೋಕಾರ್ಪಣೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸೆಂಟ್ರಲ್‌ ವಿಸ್ತಾ ಯೋಜನೆ ಭಾಗವಾಗಿ ಹೊಸ ಸಂಸತ್‌ ಭವನವನ್ನು ನಿರ್ಮಿಸಲಾಗುತ್ತಿದೆ. ತ್ರಿಕೋನಾಕಾರದ ಸಂಸತ್‌ ಭವನ ಇದಾಗಿದೆ. ಕಟ್ಟಡ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಕಟ್ಟಡದ ಒಳಾಂಗಣ ವಿನ್ಯಾಸದ ಕೆಲಸಗಳು ನಡೆಯುತ್ತಿವೆ.

   ಸುಮಾರು 1,200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಕುಳಿತುಕೊಳ್ಳಲು ಅವಕಾಶವಿದೆ. 

   ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2020 ರಲ್ಲಿ ಈ ಹೊಸ ಸಂಸತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಸರ್ಕಾರ ಕಳೆದ ವರ್ಷದ ನವೆಂಬರ್‌ ಒಳಗಡೆ ಕಾಮಗಾರಿ ಮುಕ್ತಾಯಗೊಳಿಸುವ ಗುರಿಯನ್ನು ನಿಗದಿ ಪಡಿಸಿತ್ತು. ಆದರೆ ಕೋವಿಡ್‌ ಮತ್ತು ಇತರೆ ಕೆಲ ಸಮಸ್ಯೆಗಳಿಂದಾಗಿ ಡೆಡ್‌ಲೈನ್‌ ವಿಸ್ತರಣೆಯಾಗಿ ಈಗ ಉದ್ಘಾಟನೆಯ ಹಂತಕ್ಕೆ ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap