ಸೆಪ್ಟೆಂಬರ್ ಕೊನೆಯ ಹೊತ್ತಿಗೆ ಎರಡು ದಿನಗಳ ಉದ್ಯೋಗ ಮೇಳ

ಬೆಂಗಳೂರು

            ಯುವಜನರಿಗೆ ಉದ್ತೋಗ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಸೆಪ್ಟೆಂಬರ್ ಕೊನೆಯ ಹೊತ್ತಿಗೆ ಬೆಂಗಳೂರಿನಲ್ಲಿ ಎರಡು ದಿನಗಳ ಉದ್ಯೋಗ ಮೇಳ ನಡೆಸಲಾಗುವುದು ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಗಮನದಲ್ಲಿಟ್ಟು ಕೊಂಡು ನಡೆಸುತ್ತಿರುವ ಈ ಮೇಳದಲ್ಲಿ ಸುಮಾರು 200 ಕಂಪನಿಗಳುಭಾಗವಹಿಸಲಿವೆ ಎಂದಿದ್ದಾರೆ.ಜತೆಗೆ, ಮುಂಬರುವ ದಿನಗಳಲ್ಲಿ ರಾಜ್ಯದ ಬೇರೆಬೇರೆ ಕಡೆಗಳಲ್ಲೂ 4-5 ಜಿಲ್ಲೆಗಳ ವ್ಯಾಪ್ತಿಗೆ ಒಂದರಂತೆ ಇಂತಹಮೇಳಗಳನ್ನು ಹಮ್ಮಿಕೊಳ್ಳಲಾಗುವುದು. ದೂರದ ಜಿಲ್ಲೆಗಳ ಯುವಜನರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಹೀಗೆಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.ನಮ್ಮಲ್ಲಿ ಎಂಜಿನಿಯರಿಂಗ್ ಮತ್ತಿತರ ಇತರೆ ಪದವೀಧರರಿಗೇ ಕೊರತೆಯಿಲ್ಲ. ಆದರೆ, ಎಲ್ಲ ಪದವೀಧರರಿಗೂ ಕೆಲಸಸಿಗುತ್ತಿಲ್ಲ. ಹೀಗಾಗಿ ನಿರುದ್ಯೋಗ ಸಮಸ್ಯೆಯು ಭೂತಾಕಾರವಾಗಿ ಬೆಳೆದಿದೆ. ಇದನ್ನು ನಿವಾರಿಸಲು ಯುವಜನರಿಗೆ ಅಗತ್ಯ ಕೌಶಲ್ಯಗಳನ್ನು ಒದಗಿಸಿ, ಅವರನ್ನೆಲ್ಲ ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಸಚಿವರು ಹೇಳಿದರು.

ಸಮಾಜದಲ್ಲಿ ಪ್ರತಿಯೊಬ್ಬರೂ ಉದ್ಯೋಗವವನ್ನು ಕೇಳುವವರೇ ಆಗಬಾರದು. ಹೀಗಾಗಿ ನಾವು ಉದ್ಯೋಗದಾತರನ್ನು ಸೃಷ್ಟಿಸಬೇಕಾಗಿದೆ. ಯುವಜನರಿಗೆ ಉದ್ಯೋಗ ಮತ್ತು ಉದ್ಯೋಗದಾತ ಸಂಸ್ಥೆಗಳ ಉಳಿವು ಎರಡನ್ನೂ ಗಮನದಲ್ಲಿ ಇಟ್ಟುಕೊಳ್ಳಬೇಕಾಗಿದೆ ಎಂದು ಸಚಿವ ದೇಶಪಾಂಡೆ ವಿವರಿಸಿದರು.ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ ಕೂಡ ಸಾವಿರಾರು ಉದ್ಯೋಗಾಕಾಂಕ್ಷಿಗಳು ಅರ್ಜಿಸಲ್ಲಿಸುತ್ತಿದ್ದಾರೆ. ಇಂತಹ ಅರ್ಜಿಗಳಿಗೆ ಸ್ಪಂದಿಸಲೆಂದೇ ಕೌಶಲ್ಯಾಭಿವೃದ್ಧಿ ಇಲಾಖೆಯ ತಂತ್ರಾಂಶ ವ್ಯೆವಸ್ಥೆಯಲ್ಲಿ ಪ್ರತ್ಯೇಕ ವಿಭಾಗ ತೆರೆಯಲಾಗುವುದು. ಜತೆಗೆ, ಈ ಪಟ್ಟಿಯನ್ನು ಕಾಸಿಯಾದಂತಹ ಔದ್ಯಮಿಕ ಸಂಘಟನೆಗೆ ನೀಡಲಾಗುವುದು. ಇದರಿಂದ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಅಲ್ಲದೆ, ಕಾರ್ಮಿಕ ಇಲಾಖೆಯು ಕೈಗೊಂಡಿರುವ ಆಶಾದೀಪ? ಯೋಜನೆಯನ್ನು ಕೂಡ ಇದರ ಮೂಲಕ ಉತ್ತೇಜಿಸಲಾಗುವುದು ಎಂದು ಅವರು ನುಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಎಲ್ಲಾ ಉದ್ದಿಮೆ ಸಂಸ್ಥೆಗಳೂ ಇಲಾಖೆಯ  ಜಾಲತಾಣದಲ್ಲಿ ತಮ್ಮ ಹೆಸರನ್ನು ವೃತ್ತಿ ಕೌಶಲ್ಯ ತರಬೇತಿದಾರರಾಗಿ ನೋಂದಾಯಿಸಿಕೊಳ್ಳಬೇಕು ಎಂದು ಸೂಚಿಸಿದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link