ನವದೆಹಲಿ
ಭಾರತ-ಅಮೆರಿಕ ಮಧ್ಯೆ ನಡೆಯುತ್ತಿರುವ ಸುಂಕ ಸಮರ ಮಧ್ಯೆ ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.
ಸೆಪ್ಟೆಂಬರ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ (UNGA)ಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರು ತೆರಳುತ್ತಿದ್ದು, ಆ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಬಹುದು ಎಂದು ಹೇಳಲಾಗುತ್ತಿದೆ.
ಭಾರತದ ಮೇಲೆ ಆರಂಭಿಕ ಶೇಕಡಾ 25ರಷ್ಟು ಸುಂಕ ಮತ್ತು ಭಾರತ ರಷ್ಯಾದ ತೈಲ ಖರೀದಿಯ ಮೇಲೆ ಹೆಚ್ಚುವರಿ ಶೇಕಡಾ 25ರಷ್ಟು ಸುಂಕ ವಿಧಿಸುವ ಅಮೆರಿಕ ನಿರ್ಧಾರದ ಹಿನ್ನೆಲೆಯಲ್ಲಿ ಈ ಮಾತುಕತೆಗಳು ನಡೆಯುತ್ತವೆ, ಒಟ್ಟಾರೆಯಾಗಿ ಅಮೆರಿಕ ಭಾರತದ ಮೇಲೆ ಶೇಕಡಾ 50ರಷ್ಟು ಸುಂಕ ವಿಧಿಸಿದೆ.








