ಬೆಂಗಳೂರು:
ಕೇಂದ್ರದ ಜನ ವಿರೋಧಿ ನೀತಿ ಖಂಡಿಸಿ ಸೆಪ್ಟೆಂಬರ್ 10 ರಂದು ಭಾರತ್ ಬಂದ್‍ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕರೆ ನೀಡಿವೆ.
ಕೇಂದ್ರದ ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಸರ್ಕಾರದ ನೀತಿಯಿಂದಾಗಿ ದೇಶದಲ್ಲಿ ಆತಂಕ ಸ್ಥಿತಿ ನಿರ್ಮಾಣವಾಗಿದೆ,ಈ ಹಿನ್ನೆಲೆಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರುವವರು ಈ ಬಾರತ್ ಬಂದ್‍ಗೆ ಬೆಂಬಲಿಸುತ್ತಾರೆ. ಎಂದು ಕಾಂಗ್ರೆಸ್ ತಿಳಿಸಿದೆ.
ಎಐಟಿಯುಸಿ ನೇತೃತ್ವದ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್, ಸಿಐಟಿಯು ಸೇರಿದಂತೆ ಇನ್ನಿತರೆ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಹೀಗಾಗಿ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳು ರಸ್ತೆಗಿಳಿಯುವುದಿಲ್ಲ. ಓಲಾ, ಉಬರ್ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರ ಸಂಘಟನೆ ಕೂಡ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಕೈಜೋಡಿಸಿದೆ. ಕೆಲವು ಆಟೊ ಚಾಲಕರ ಸಂಘಟನೆಗಳು ಮಾತ್ರ ಮುಷ್ಕರದಲ್ಲಿ ಭಾಗಿಯಾಗುತ್ತಿವೆ.
ಶಾಲೆ ಕಾಲೇಜುಗಳು ಸೋಮವಾರ ರಜೆ ಘೋಷಿಸುತ್ತವೆಯೇ ಇಲ್ಲವೇ ಎಂಬುದು ಇಂದು(ಶನಿವಾರ) ನಿರ್ಧಾರವಾಗಲಿದ್ದು, ಸುರಕ್ಷತೆಯ ದೃಷ್ಟಿಯಿಂದ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ