ತುಮಕೂರು
ಮಹಾನಗರಪಾಲಿಕೆ ವ್ಯಾಪ್ತಿಯ ಆಟೋಚಾಲಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ತುಮಕೂರು ಜಿಲ್ಲಾ ಬಿಜೆಪಿ ಆಟೋ ಪ್ರಕೋಷ್ಟದಿಂದ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಆಟೋಪ್ರಕೋಷ್ಟದ ಸಂಚಾಲಕರಾದ ಕೆ.ಎಂ.ಶಿವಕುಮಾರ್ (ಆಟೋ ಯಡಿಯೂರಪ್ಪ) ತಿಳಿಸಿದ್ದಾರೆ.
ಕಾರ್ಯಕ್ರಮವು ತುಮಕೂರು ನಗರ ಬಿಜೆಪಿ ಕಾರ್ಯಲಯ ಆವರಣದಲ್ಲಿ ನಡೆಯಲಿದ್ದು ಅದರ ಉದ್ಘಾಟನೆಯನ್ನು ತುಮಕೂರು ನಗರದ ಜನಪ್ರಿಯ ಶಾಸಕರು ಮತ್ತು ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಜಿ.ಬಿ.ಜ್ಯೋತಿಗಣೇಶ್ ರವರು ನೆರೆವೆರೆಸುವರು ಮುಖ್ಯ ಅತಿಥಿಗಳಾಗಿ ಭಾರತೀಯ ಜನತಾ ಪಾರ್ಟಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮತ್ತು ತುಮಕೂರು ಮಹಾನಗರ ಪಾಲಿಕೆಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಶಿವಕುಮಾರ್ ತಿಳಿಸಿರುತ್ತಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ