ಹೊನ್ನಾಳಿ:

ಸಾರ್ವಜನಿಕರ ಕಚೇರಿ ಅಲೆದಾಟ ತಪ್ಪಿಸುವುದು ಗ್ರಾಮ ವಾಸ್ತವ್ಯದ ಉದ್ದೇಶ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ತಾಲೂಕಿನ ಕುಂದೂರು ಗ್ರಾಮದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿಗಳು-ತಹಸೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳೂ ಗ್ರಾಮಗಳಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟೂ ಸ್ಥಳದಲ್ಲೇ ಪರಿಹಾರ ನೀಡುತ್ತಾರೆ. ಇದು ರಾಜ್ಯದಲ್ಲಿ ಯಶಸ್ವಿಯಾಗುತ್ತಿದೆ. ಕ್ರಾಂತಿಕಾರಿ ಕಾರ್ಯಕ್ರಮಗಳಲ್ಲಿ ಇದೂ ಒಂದು ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಹಾಗೂ ಸಚಿವ ವಿ. ಸೋಮಣ್ಣ-ನಿಮ್ಮ ನಡುವೆ ಉದ್ಭವಿಸಿರುವ ಭಿನ್ನಾಭಿಪ್ರಾಯ ಏನು ಎಂಬ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ, ನಾನು ಏನನ್ನೂ ಹೇಳಬಯಸುವುದಿಲ್ಲ ಎಂದು ಹೇಳಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಆರ್‍ಎಸ್ಸೆಸ್ ಕುರಿತ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಖಂಡಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹತಾಶರಾಗಿದ್ದಾರೆ. ಅವರಿಗೆ ಬುದ್ಧಿಭ್ರಮಣೆಯಾಗಿದೆ. ಆರ್‍ಎಸ್ಸೆಸ್ ಒಂದು ನಿಸ್ವಾರ್ಥ ಸೇವಾ ಸಂಸ್ಥೆಯಾಗಿದೆ. ಅದರ ಅಡಿಯಲ್ಲೇ ನಾವೆಲ್ಲರೂ ಬೆಳೆದಿದ್ದೇವೆ. ಆ ಬಗ್ಗೆ ಹಗುರವಾಗಿ ಮಾತನಾಡಿದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








