ಬಳ್ಳಾರಿ
ಸ್ಥಳೀಯ ಶ್ರೀಮತಿ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿರುವ ಸೋಮಶೇಖರ್ ಎಂ. ಇವರಿಗೆ ಗುಲಬರ್ಗಾ ವಿಶ್ವವಿದ್ಯಾಲಯವು ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ಘೋಷಿಸಿದೆ.
ಸೋಮಶೇಖರ್ ಅವರು ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನ ಸಂಸ್ಥೆಯ ಪ್ರಾಧ್ಯಾಪಕರಾಗಿರುವ ಡಾ.ವ್ಹಿ.ಜಿ.ಪೂಜಾರ್ ಅವರ ಮಾರ್ಗದರ್ಶನದಲ್ಲಿ “ಪ್ರಭುತ್ವ ವಿರೋಧದ ನೆಲೆಯಲ್ಲಿ ನಡುಗನ್ನಡ ಸಾಹಿತ್ಯ’’ ಎಂಬ ಶೀರ್ಷಿಕೆಯಡಿಯಲ್ಲಿ ಸಂಶೋಧನೆ ನಡೆಸಿ ಸಾದರ ಪಡಿಸಿದ ಮಹಾಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ. ಈ ಕುರಿತು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಸೋಮಶೇಖರ್ ಎಂ. ಅವರನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ರಾಧಾಕೃಷ್ಣ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.