ಸ್ಮಾರ್ಟ್‍ಸಿಟಿ ಕಾಮಗಾರಿ ವಿಳಂಬಕ್ಕೆ ದಿನೇಶ್ ಕೆ.ಶೆಟ್ಟಿ ಆಕ್ಷೇಪ

 ದಾವಣಗೆರೆ :

      ದಾವಣಗೆರೆ ನಗರ ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆ ಆಗಿ ಮೂರು ವರುಷವಾದರೂ ಸಹ ಇದುವರೆಗೂ ಸಮರ್ಪಕವಾಗಿ ಕಾಮಗಾರಿಯನ್ನು ಅನುಷ್ಠಾನಗೊಳಿಸದಿರುವ ಬಗ್ಗೆ ಮಹಾನಗರ ಪಾಲಿಕೆ ಸದಸ್ಯರಾದ ದಿನೇಶ್ ಕೆ.ಶೆಟ್ಟಿ ಅವರು ಆಕ್ಷೇಪ ವ್ಯಕ್ತಪಡಿಸಿದರು.

      ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸ್ಮಾರ್ಟ್‍ಸಿಟಿ ಯೋಜನೆಯ ಅನುಷ್ಠಾನ ಮತ್ತು ವಿಮರ್ಶೆ ಕಮಿಟಿಯ ಸಭೆಯಲ್ಲಿ ದಿನೇಶ್ ಕೆ.ಶೆಟ್ಟಿ ಅವರು ಆಕ್ಷೇಪ ವ್ಯಕ್ತಪಡಿಸಿದರು.

      ಮೂರು ವರುಷಗಳ ನಂತರ 4 ರಸ್ತೆಗಳ ಕಾಮಗಾರಿಗಳನ್ನು ಆರಂಭಿಸಲಾಗಿದ್ದರೂ ಕಾಮಗಾರಿಗಳ ವಿಳಂಬದಿಂದಾಗಿ ಸಾರ್ವಜನಿಕರಿಗೆ ಅನಾನುಕೂಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

      ಸ್ಮಾರ್ಟ್ ಸಿಟಿ ಯೋಜನೆಯ ಛೇರ್ಮನ್ ಆಗಿರುವ ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್ ಅವರು ದಿನೇಶ್ ಕೆ. ಶೆಟ್ಟಿ ಅವರ ಆಕ್ಷೇಪವನ್ನು ಪರಿಗಣಿಸಿ ತುರ್ತಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.

      ಸಭೆಯಲ್ಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರ ಸೂಚನೆ ಮೇರೆಗೆ ಯೋಜನೆಯಡಿ ಆಶ್ರಯ ಬಡಾವಣೆಗಳಾದ ಎಸ್.ಎಸ್.ಎಂ. ನಗರ, ರಾಜೀವ್ ಗಾಂಧಿ ಬಡಾವಣೆ, ಎಸ್.ಎಂ.ಕೃಷ್ಣ ನಗರ, ಎಸ್.ಪಿ.ಎಸ್.ನಗರ 1 ಮತ್ತು 2ನೇ ಹಂತದಲ್ಲಿ ಪ್ರಮುಖವಾಗಿ ರಸ್ತೆ ಮರು ನಿರ್ಮಾಣ, ಒಳಚರಂಡಿ, ವಿದ್ಯುತ್ ವ್ಯವಸ್ಥೆ ಸೇರಿದಂತೆ ಒಟ್ಟಾರೆ 37 ಕೋಟಿ ರೂಗಳ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಯಿತು.

      ಸಭೆಯಲ್ಲಿ ಪೌರಾಡಳಿತ ನಿರ್ದೇಶಕರಾದ ಶೇಖರಪ್ಪ, ಮಹಾಪೌರರಾದ ಶ್ರೀಮತಿ ಶೋಭಾ ಪಲ್ಲಾಗಟ್ಟೆ, ಮಹಾನಗರ ಪಾಲಿಕೆ ಆಯುಕ್ತರಾದ ಮಂಜುನಾಥ್ ಆರ್.ಬಳ್ಳಾರಿ, ಪಾಲಿಕೆ ಸದಸ್ಯರಾದ ಪಿ.ಎನ್.ಚಂದ್ರಶೇಖರ್, ಜಿಲ್ಲಾಧಿಕಾರಿ ಡಿ.ಎಸ್ ರಮೇಶ್, ಸ್ಮಾರ್ಟ್‍ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರಾದ ಆಶಾದ್ ಆರ್.ಷರೀಫ್, ಮುಖ್ಯ ಅಭಿಯಂತರ ಸತೀಶ್, ಹೈಡೆಕ್ ಸಂಸ್ಥೆಯವರು ಉಪಸ್ಥಿತರಿದ್ದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link