ಸ್ವಯಂ ಉದ್ಯೋಗ ಸಾಲ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ (ನವೀಕರಣ) ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಉಪ್ಪಾರ ಮತ್ತು ಇದರ ಉಪಜಾತಿಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು ಹಾಗೂ ಈ ಸೌಲಭ್ಯ ಪಡೆಯುವ ಅಭ್ಯರ್ಥಿಗಳು ಸರ್ಕಾರದ ಯಾವುದೇ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.

ಅರ್ಹ ಅಭ್ಯರ್ಥಿಗಳು ವೆಬ್ ಸೈಟ್ www.suvidha.karnataka.gov.in  ನ ತಂತ್ರಾಶದ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ಆಗಷ್ಟ್ 12 ರೊಳಗೆ ಕಚೇರಿ ಸಮಯದಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ (helpline) ಸಂಖ್ಯೆ : 7026288888 ಮತ್ತು ಜಿಲ್ಲಾ ಕಚೇರಿ ಸಹಾಯವಾಣಿ ಸಂಖ್ಯೆ: 080-23539601 ಅನ್ನು ಅಥವಾ ಆಯಾ ಜಿಲ್ಲೆಗಳಲ್ಲಿರುವ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ನಿಗಮದ ವೆಬ್ ಸೈಟ್ http://upparadevelopment.karantaka.gov.in ರಲ್ಲಿ ಪಡೆಯಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ) ದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent Articles

spot_img

Related Stories

Share via
Copy link