ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ಕರೆ

ಮಧುಗಿರಿ:

            ಕೌಶಲ್ಯತೆಯ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ಯುವಜನರು ಬೆಳೆಸಿಕೊಂಡಾಗ ಮಾತ್ರ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುವುದು ಎಂದು ಸಂಪನ್ಮೂಲ ವ್ಯಕ್ತಿ ಬೆಂಗಳೂರಿನ ಉತ್ತಮ್ ಶ್ರೇಯಕರ್ ತಿಳಿಸಿದರು.
              ಮಧುಗಿರಿಯ ಜ್ಞಾನಪ್ರಿಯ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ “ಕೌಶಲ್ಯಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನ” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವಿದ್ಯಾರ್ಥಿಗಳ ಮನಸ್ಸು ವಿಕಸನ ಹೊಂದುತ್ತದೆ. ಆರೋಗ್ಯಕರ ಹಾಗೂ ಒಳ್ಳೆಯ ವ್ಯಕ್ತಿತ್ವವಿರುವವರು ತಾನೂ ಕ್ಷೇಮವಾಗಿ ಇತರರು ಕ್ಷೇಮವಾಗಿರಲು ಕೆಲಸ ಮಾಡಬಲ್ಲರು. ನೀವು ಸಹ ಉತ್ತಮ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡಬೇಕು ಎಂದರು.
             ಕಾಲೇಜಿನ ಕಾರ್ಯದರ್ಶಿ ಮಧುಪ್ರಿಯ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಚಾರ. ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ನಮ್ಮ ಕಾಲೇಜಿನ ವತಿಯಿಂದ ಇಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿ ಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
             ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜೈಪಾಲ, ಸಿಬ್ಬಂದಿವರ್ಗದವರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap