ಬೆಂಗಳೂರು:
ನಗರದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಶಾಂತಿಗೆ ಭಂಗ ತರುವಂತಹ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಆಯಾ ವಲಯದ ಡಿಸಿಪಿ ಹಾಗೂ ಎಸಿಪಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ರವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಹಾಯಕ ಪೊಲೀಸ್ ಆಯುಕ್ತರು ಮತ್ತು ಮೇಲ್ಮಟ್ಟ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗಣೇಶ ಹಬ್ಬಕ್ಕೆ ಈಗಾಗಲೇ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಸಿದ್ಧತೆ ನಡೆಸಿದೆ.
ನಗರದಲ್ಲಿ ಎಸಿಪಿಗಳು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಬೇಕು. ಅಲ್ಲದೆ, ಕಡ್ಡಾಯವಾಗಿ ಗಸ್ತು ಹೋಗುವಂತೆ ಎಸಿಪಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
.
