ಬೆಂಗಳೂರು:
ನಗರದ ಪ್ರತಿಷ್ಠಿತ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವಾರು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸುಹೇಲ್ ಎಂಬ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರು 1.45ರ ವೇಳೆಗೆ ಬಾಣಸವಾಡಿ ಮುಖ್ಯರಸ್ತೆಯಲ್ಲಿ ಸ್ಕೂಟರ್ ಮೇಲೆ ತೆರಳುತ್ತಿದ್ದ ಸುಹೇಲ್ ಗೆ ಬೈಕ್ ನಿಲ್ಲಿಸುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಆದರೆ ಆತ ನಿಲ್ಲಿಸದೆ ಬೈಕ್ ನಿಂದ ಇನ್‌ಸ್ಪೆಕ್ಟರ್ ಶರತ್ ಕುಮಾರ್ ಹಾಗೂ ಮುಖ್ಯಪೇದೆ ರಫೀಕ್ ಅವರುಗಳ ಮೇಲೆ ಪ್ರತಿದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ . ಆತ್ಮರಕ್ಷಣೆಗಾಗಿ ಪೊಲೀಸರು ಎರಡು ಸುತ್ತಿನ ಫೈರಿಂಗ್ ನಡೆಸಿದ್ದಾರೆ. ಘಟನೆಯಲ್ಲಿ ಸುಹೇಲ್ ಗಾಯಗೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ