ಹಾವೇರಿ
ಆಹಾರ ಮತ್ತು ನಾಗರೀಕ ಸರಬರಾಜು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್‍ಖಾನ್ ಅವರು ಸೆಪ್ಟೆಂಬರ್ 5 ರಂದು ಹಾವೇರಿ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಹಾವೇರಿಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಗುರುಭವನದಲ್ಲಿ ನಡೆಲಿರುವ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 130ನೇ ಜನ್ಮ ದಿನೋತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಪಕ್ಷದ ಕಚೇರಿಯಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನೂತನವಾಗಿ ಆಯ್ಕೆಯಾದ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1-30ಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ 3 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ