ಹಾವೇರಿ
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಾವೇರಿ ಲೋಕಸಭಾ ಕ್ಷೇತ್ರದಿಂದ 19 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈ ಪೈಕಿ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತಗೊಂಡಿವೆ.
ಶುಕ್ರವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ಅವರು ನಾಮಪತ್ರ ಪರಿಶೀಲನೆ ನಡೆಸಿದರು. 19 ಅಭ್ಯರ್ಥಿಗಳಿಂದ ಮೂವತ್ತು ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಪಕ್ಷೇತರ ಅಭ್ಯರ್ಥಿಗಳಾದ ನಜೀರ್ ಅಹ್ಮದ್ ಸವಣೂರ, ವಿರೇಶ ಮಲ್ಲಪ್ಪ ಕಿರವಾಡಿ ಹಾಗೂ ಇಸ್ಮಾಯಿಲ್ ಮುತ್ತಬಿ ಇವರುಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.
ಉಳಿದಂತೆ 16 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಅವರು ತಿಳಿಸಿದ್ದಾರೆ.ನಾಮಪತ್ರಗಳಿಗೆ ಅಭ್ಯರ್ಥಿಗಳು ಸಹಿ ಮಾಡಿದ ಕ್ರಮಬದ್ಧ ಅಫಿಡವಿಟ್ ಸಲ್ಲಿಸಿದ ಹಾಗೂ ಸೂಚಕರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇಲ್ಲದ ಕಾರಣಗಳಿಗಾಗಿ ಉಮೇದುವಾರಿಕೆ ಅರ್ಜಿಗಳು ತಿರಸ್ಕøತಗೊಂಡಿವೆ. ನಾಮಪತ್ರ ಹಿಂಪಡೆಯಲು ಎಪ್ರಿಲ್ 8 ಸೋಮವಾರ ಕೊನೆಯ ದಿನವಾಗಿದೆ.
ನಾಮಪತ್ರ ಪರಿಶೀಲನೆಯಲ್ಲಿ ಭಾರತ ಚುನಾವಣಾ ಆಯೋಗದಿಂದ ನಿಯೋಜಿತ ಹಾವೇರಿ ಲೋಕಸಭಾ ಕ್ಷೇತ್ರದ ಕೇಂದ್ರ ಸಾಮಾನ್ಯ ವೀಕ್ಷಕರಾದ ಡಾ.ಅಖ್ತರ್ ರಿಯಾಜ್, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸಹಾಯಕ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಉಪಸ್ಥಿತರಿದ್ದರು.