ಹಾಸನ : ಕಾಂಗ್ರೆಸ್ ಸಭೆಯಲ್ಲಿ ಮೋದಿ ಪರ ಘೋಷಣೆ!!

ಹಾಸನ :

      ಇಂದು ನಡೆದ ಕಾಂಗ್ರೆಸ್ ಸಭೆಯಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ಪರ ಘೋಷಣೆ ಕೇಳಿಬಂದ ಘಟನೆ ಸೋಮವಾರ ಪಟ್ಟಣದಲ್ಲಿ ನಡೆಯಿತು. 

     ಹಾಸನದ ಚನ್ನರಾಯಪಟ್ಟಣ ತಾಲೂಕು ಉದಯಪುರದಲ್ಲಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸ್ಥಳೀಯ ಕಾಂಗ್ರೆಸ್‌ ನಾಯಕ ಬಾಗಲೂರು ಮಂಜುನಾಥ್ ಸೇರಿದಂತೆ ಇನ್ನಿತ್ತರ ಮಂದಿ ಜೆಡಿಎಸ್‌ಗೆ ಮತ ಹಾಕುವಂತೆ ಮನವಿ ಮಾಡಿಕೊಂಡರು.

      ಈ ವೇಳೆ ಭಿನ್ನಮತ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರು ಮುಖಂಡರುಗಳಿಗೆ ಧಿಕ್ಕಾರ ಕೂಗಿ, ಮೋದಿ ಹಾಗೂ ಬಿಜೆಪಿ ಪರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

      ಮೋದಿ ಪರ ಘೋಷಣೆ ಕೂಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕರು ಕೆಲವು ಬಿಜೆಪಿ ಕಾರ್ಯಕರ್ತರು ಸಭೆಗೆ ಆಗಮಿಸಿ ಮೋದಿ ಪರ ಘೋಷಣೆ ಕೂಗಿದ್ದಾರೆ ಅಂತ ಆರೋಪಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link