ಹಿಂದುತ್ವದ ಅವಹೇಳನ- ರಾಹುಲ್ ಗಾಂಧಿ ಕ್ಷಮೆ ಯಾಚಿಸಲಿ

ಬೆಂಗಳೂರು :

     ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆಯಿತು. 

     ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಪಕ್ಷವನ್ನು ನಿರಂತರವಾಗಿ ಸಂಘಟಿಸಲು ಪದಾಧಿಕಾರಿಗಳು ನಿರಂತರವಾಗಿ ಶ್ರಮಿಸಬೇಕು. 100 ದಿನಗಳಲ್ಲಿ ಸಿದ್ದರಾಮಯ್ಯ ಸರಕಾರ ಜನಪ್ರಿಯತೆ ಕಳೆದುಕೊಂಡಿದ್ದು, ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು. ಇದೇ 18ರಿಂದ ಕುರುಡುಮಲೆಯಿಂದ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ. ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ.

     ಸಭೆ ಕುರಿತು ಮಾಹಿತಿ ನೀಡಿದ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್, ಎಸ್‌ಸಿ, ಎಸ್‌ಟಿ ಸಮುದಾಯದ ಅನುದಾನವನ್ನು ದುರುಪಯೋಗ ಮಾಡಿಕೊಂಡು ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಭೀಕರ ಬರಗಾಲ ಇದ್ದರೂ ಅದರ ಕಡೆಗೆ ಗಮನ ನೀಡುತ್ತಿಲ್ಲ ಎಂದು ಯಡಿಯೂರಪ್ಪ ಆಕ್ಷೇಪಿಸಿದ್ದು, ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿಯವರು ವಿದೇಶಿ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿ ಮಾತನಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾಗಿ ವಿವರಿಸಿದ್ದಾರೆ.

     ಉದ್ಘಾಟನಾ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಮಾತನಾಡಿ, ಪಕ್ಷ ಸಂಘಟನೆಗೆ ಒತ್ತು ಕೊಡುವಂತೆ ಸಲಹೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಬರಗಾಲ, ಆಡಳಿತದಲ್ಲಿ ವೈಫಲ್ಯ ಸೇರಿದಂತೆ ಕಾಂಗ್ರೆಸ್ ಸರಕಾರದ ಅಸಮರ್ಪಕ ಆಡಳಿತ ವೈಖರಿ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ತಿಳಿಸಿದ್ದಾಗಿ ಎಂ.ಜಿ. ಮಹೇಶ್ ಅವರು ವಿವರ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link