ಹಿಂದುಳಿದವರಿಗೆ ದಾರಿದೀಪವಾದ ಅಂಬೇಡ್ಕರ್

ದಾವಣಗೆರೆ :

      ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವು ದೀನ-ದಲಿತರಿಗೆ ಹಾಗೂ ಹಿಂದುಳಿದವರಿಗೆ ದಾರಿದೀಪವಾಗಿದೆ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಅಭಿಪ್ರಾಯಪಟ್ಟರು.ಇಲ್ಲಿನ ಅರುಣ ಚಿತ್ರಮಂದಿರ ಸಮೀಪದ ಬಿಜೆಪಿ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್‍ರಾಂ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

       ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತುಳಿತಕ್ಕೆ ಒಳಗಾಗಿದ್ದ ಶೋಷಿತ ಸಮುದಾಯಗಳಿಗೆ ಸಮಾನ ಹಕ್ಕು ಕಲ್ಪಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವುದರ ಜೊತೆಗೆ ಆರ್ಥಿಕ ಸಬಲರನ್ನಾಗಿಸಲು ಪ್ರಯತ್ನಿಸಿದ್ದರು ಎಂದು ಸ್ಮರಿಸಿದರು.
ಸರಕಾರದಿಂದ ಹಿಂದುಳಿದ ದಲಿತರಿಗೆ ಸಾಕಷ್ಟು ಸೌಲತ್ತುಗಳಿವೆ.

        ಆದರೆ, ಅವರಿಗೆ ಪೂರ್ಣ ಪ್ರಮಾಣದಲ್ಲಿ ದೊರೆಯುತ್ತಿಲ್ಲ. ಎಸ್‍ಸಿ-ಸ್‍ಟಿ ಜನರಲೇ ಬುದ್ಧಿವಂತರಾದವರು ಮಾತ್ರ ಸೌಲಭ್ಯ ಪಡೆದು ಮುನ್ನೆಲೆಗೆ ಬರುತ್ತಿದ್ದಾರೆ. ಆದರೆ, ಏನೂ ತಿಳಿಯದ ದಲಿತರಿಗೆ ಸೌಲಭ್ಯಗಳ ಬಗ್ಗೆ ಅರಿವು ಸಹ ಮೂಡಿಸದ ಕಾರಣ ಆ ವರ್ಗಗಳಲ್ಲಿ ಸಾಮಾಜಿಕ ನ್ಯಾಯದಿಂದ ವಂಚಿತರಾಗುತ್ತಿದ್ದಾರೆ ಎಂದು ಆಪಾದಿಸಿದರು.

        ಸೌಲಭ್ಯ ಪಡೆದು ಮುಂದೆ ಬಂದಿರುವವರು ಸವಲತ್ತು ಬಳಸಿಕೊಳ್ಳದ ಜನರಿಗೆ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಅರಿವು ಮೂಡಿಸಲು ಸಹಕರಿಸಬೇಕು. ಆಗ ಮಾತ್ರ ಇಂತಹ ಶ್ರೇಷ್ಠ ವ್ಯಕ್ತಿಗಳ ಜನ್ಮ ದಿನಾಚರಣೆಗೆ ಒಂದು ಅರ್ಥ ಬರಲಿದೆ ಎಂದರು.ಡಾ.ಬಾಬು ಜಗಜೀವನ್‍ರಾಂ ಹಸಿರು ಕ್ರಾಂತಿಯ ಹರಿಕಾರರಾಗಿದ್ದಾರೆ. ಅವರು ಸತ್ತ ಮೇಲೆ ಅವರನ್ನು ಹೊಗಳುವ ಕೆಲಸವಾಯ್ತು ವಿನಃ ಬದುಕಿದ್ದಾಗ ಅವರನ್ನು ಗೆಲ್ಲಿಸಿಕೊಂಡು ಬಂದು ಕಾಂಗ್ರೆಸ್ ಪ್ರಧಾನಿ ಮಾಡಲಿಲ್ಲ ಎಂದು ಆರೋಪಿಸಿದರು.

         ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್ ಮಾತನಾಡಿ, ಕಾಂಗ್ರೆಸ್ ಸುಳ್ಳು ಹೇಳಿ ದೇಶ ಆಳುವ ಕೆಲಸ ಮಾಡುತ್ತಿದ್ದಾರೆ. ಹಿಂದುಳಿದ, ತಳ ಸಮುದಾಯದ ಜನರನ್ನು ನಾವು ಮೇಲೆತ್ತಿದ್ದೇವೆಂದು ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ. ಅಂಬೇಡ್ಕರ್ ರಚಿಸಿದ ಸಂವಿಧಾನ ಸಾಕಷ್ಟು ಬಾರಿ ತಿದ್ದುಪಡಿ ಆಗಿದೆ. ಹಾಗಾಗಿ ಆನಂತ್‍ಕುಮಾರ್ ಹೆಗಡೆ ಮೂಲ ಸಂವಿಧಾನ ಬರಲಿ ಎಂದಿದ್ದಕ್ಕೆ ಕಾಂಗ್ರೆಸ್ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

       ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಕೆ.ಎನ್.ಓಂಕಾರಪ್ಪ, ಎಸ್‍ಸಿ ಘಟಕದ ಅಧ್ಯಕ್ಷ ಎಲ್.ಡಿ. ಗೋಣೆಪ್ಪ, ರಾಜನಹಳ್ಳಿ ಶಿವಕುಮಾರ್, ಸೋಗಿ ಶಾಂತಕುಮಾರ್, ಸಿದ್ದಲಿಂಗಣ್ಣ, ಸವಿತಾ ರವಿಕುಮಾರ್, ರಮೇಶ್ ನಾಯ್ಕ್, ಕರಿಯಪ್ಪ, ರಾಜು ಮತ್ತಿತರರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap