ಹಿರಿಯೂರು
ನಗರದ ತಾಲ್ಲೂಕು ಯುವ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಏರ್ಪಡಿಸಲಾಗಿದ್ದ 72ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಕ್ಷೇತ್ರದ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್‍ರವರು ಇಂದಿನ ಪ್ರಜಾಪ್ರಗತಿ ಪತ್ರಿಕೆಯ ಸ್ವಾತಂತ್ರ್ಯೋತ್ಸವದ ವಿಶೇಷ ಸಂಚಿಕೆಯನ್ನು ಕುತೂಹಲದಿಂದ ವೀಕ್ಷಿಸುತ್ತಿರುವುದು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಟಿ.ಚಂದ್ರಶೇಖರ್ ಹಾಗೂ ತಾ.ಪಂ.ಅಧ್ಯಕ್ಷ ಚಂದ್ರಪ್ಪ ಇತರರು ಉಪಸ್ಥಿತರಿದ್ದರು.
