ಹಿರಿಯ ನಾಗರೀಕರಿಗೆ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಸ್ಪರ್ಧೆ

ಹಾವೇರಿ:

            ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಮೂರು ವಿಭಾಗಗಳಲ್ಲಿ ಸೆಪ್ಟೆಂಬರ್ 8 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶ್ರೀ ಚನ್ನಬಸಪ್ಪ ಮಾಗಾವಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ.
ಸ್ಪರ್ಧೆಗಳನ್ನು ಪುರುಷ ಹಾಗೂ ಮಹಿಳಾ ವಯೋವೃದ್ಧರ ವಯೋಮಿತಿ ಆಧಾರದ ಮೇಲೆ ಮೂರು ವಿಭಾಗದಲ್ಲಿ ನಡೆಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ರಾಜ್ಯ ಮಟ್ಟದಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು.
           ಹಿರಿಯ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಲು ಜಿಲ್ಲಾ ಅಂಗವಿಕಲರ ಕಲ್ಯಣಾಧಿಕಾರಿ ಮಲ್ಲಿಕಾರ್ಜುನ ಮಠದ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08375-249014ನ್ನು ಸಂಪರ್ಕಿಸಬಹುದು.

Recent Articles

spot_img

Related Stories

Share via
Copy link