ಕುಣಿಗಲ್
ತಾಲ್ಲೂಕಿನ ಅಮೃತೂರು ಹೋಬಳಿಯ ರಾಘವನಹೊಸೂರು ಗ್ರಾಮದಲ್ಲಿ ಸುಮಾರು 3 ವರ್ಷದ ಹೆಣ್ಣು ಚಿರತೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ.
ಇಲ್ಲಿನ ಕಪನಯ್ಯ ಎಂಬುವರ ಜಮೀನಿನ ರಸ್ತೆಯ ಬಳಿ ಚಿರತೆಯ ತಲೆಗೆ ತೀವ್ರ ಪೆಟ್ಟು ಬಿದ್ದಿರುವ ಗುರುತು ಇದ್ದು, ಯಾವ ಕಾರಣಕ್ಕೆ ಸಾವನ್ನಪ್ಪಿದೆ ಎಂಬುದು ತಿಳಿದುಬಂದಿಲ್ಲ ಎನ್ನಲಾಗಿದೆ. ಸುದ್ದಿ ತಿಳಿದ ಗ್ರಾಮಸ್ಥ್ತರು ಅರಣ್ಯ ಇಲಾಖಾ ಸಿಬ್ಬಂದಿಗೆ ತಿಳಿಸಿದ ಮೇರೆಗೆ ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಸತ್ತ ಚಿರತೆಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.








