ಮಂಡ್ಯ:

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಬೆಂಕಿ ಸಂಪೂರ್ಣ ಬಸ್ ವ್ಯಾಪಿಸಿ ಹೊತ್ತಿ ಉರಿದು ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ನಡೆದಿದೆ.ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ಈ ಘಟನೆ ನಡೆದಿದ್ದು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ವ್ಯಾಪಿಸಲು ಆರಂಭವಾಗಿದ್ದು, ಕೂಡಲೇ ಬಸ್‌ನ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರ ಪ್ರಾಣ ಉಳಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. 25 ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
