ಪಾವಗಡ
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಪಾವಗಡ ವತಿಯಿಂದ ಮಹಿಳೆಯರಿಗಾಗಿ ಹೈನುಗಾರಿಕಾ ಕಾರ್ಯಕ್ರಮದ ಅಡಿಯಲ್ಲಿ ಹೈನುಗಾರಿಕಾ ಘಟಕ, ಕುರಿ, ಮೇಕೆ ಸಾಕಾಣಿಕೆ ಘಟಕ ಹಾಗೂ ಕರು ಘಟಕ ಸ್ಥಾಪನೆ ಮಾಡಲು ಆಸಕ್ತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2 ಭಾವಚಿತ್ರ, ಆಧಾರ್ ಕಾರ್ಡ್, ವಾಸಸ್ಥಳ ದೃಢೀಕರಣ ಪತ್ರ, ಪಹಣಿ, ವಂಶವೃಕ್ಷ, ಉಳಿತಾಯ ಖಾತೆಯ ಬ್ಯಾಂಕ್ ಪುಸ್ತಕ ಪ್ರತಿಗಳೊಂದಿಗೆ ದ್ವಿಪ್ರತಿಯಲ್ಲಿ ತಮ್ಮ ವ್ಯಾಪ್ತಿಯ ಪಶುವೈದ್ಯಕೀಯ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಸೆ. 10 ಕೊನೆಯ ದಿನಾಂಕವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರಾದ ಡಾ.ಆರ್.ಎಂ.ನಾಗಭೂಷÀಣ ರವರನ್ನು ಸಂಪರ್ಕಿಸಲು ಕೋರಲಾಗಿದೆ.
