ಕೊರಟಗೆರೆ:
ಹೊಟ್ಟೆನೋವಿನ ಬಾಧೆ ತಾಳಲಾರದೆ ರೈತನೋರ್ವ ಮಂಗಳವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ತಾಲ್ಲೂಕಿನ ಕೋಳಾಲ ಹೋಬಳಿ ಬೈಚೇನಹಳ್ಳಿ ಗ್ರಾಮದ ಕೆಂಪಣ್ಣನ ಮಗ ಕೆಂಪರಂಗಪ್ಪ (50ವರ್ಷ) ಎಂಬುವ ರೈತನೇ ನೇಣು ಬಿಗಿದುಕೊಂಡ ದುರ್ದೈವಿಯಾಗಿದ್ದಾನೆ. ಈತ ಮನೆಯವರು ಯಾರೂ ಇಲ್ಲದ ಸಂದರ್ಭದಲ್ಲಿ ಈ ದುರ್ಘಟನೆಗೆ ಕೈ ಹಾಕಿದ್ದಾನೆ ಎನ್ನಲಾಗಿದೆ.
ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಹಳಷ್ಟು ಕೈ ಸಾಲ ಮಾಡಿಕೊಂಡಿದ್ದನು. ಜೊತೆಗೆ ಇತ್ತೀಚೆಗೆ 1 ಲಕ್ಷ ರೂ ಬ್ಯಾಂಕ್‍ನಲ್ಲಿಯೂ ಸಾಲ ಮಾಡಲಾಗಿತ್ತು ಎನ್ನಲಾಗಿದ್ದು, ಮಳೆ ಕೈ ಕೊಟ್ಟ ಕಾರಣ ಬೆಳೆ ನೆಲೆ ಕಚ್ಚಿದ ಕಾರಣ ದಿಕ್ಕುತೋಚದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನವೂ ಇದೆ ಎನ್ನಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‍ಐ ಸಂತೋಷ್‍ಕುಮಾರ್ ಸ್ಥಳಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ