ಹೊಯ್ಸಲಕಟ್ಟೆ ಶಾಲೆ ಅಭಿವೃದ್ಧಿ ಪ್ರಕಾಶ್ ರಾಜ್ ಮನವಿ

ಹುಳಿಯಾರು:

             ಹುಳಿಯಾರು ಹೋಬಳಿಯ ಹೊಯ್ಸಲಕಟ್ಟೆಯ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಖ್ಯಾತ ಚಿತ್ರನಟ ಪ್ರಕಾಶ್ ರಾಜ್ ಅವರು ತುಮಕೂರು ಜಿಲ್ಲಾ ಪಂಚಾಯಿತಿ ಸಿಇಓ ಅನೀಸ್ ಕಣ್ಮಣಿ ಜಾಯ್ ವರಿಗೆ ಮನವಿ ಮಾಡಿದರು.

            ಪ್ರಕಾಶ್ ರಾಜ್ ಫೌಂಡೇಶನ್ ಮತ್ತು ಸಮಾನ ಶಿಕ್ಷಣಕ್ಕಾಗಿ ಜನಾಂದೋಲನ ಇನ್ನಿತರೆ ಸಂಸ್ಥೆಗಳ ಸಹಯೋಗದಲ್ಲಿ ತುಮಕೂರು ಜಿಲ್ಲಾ ಪಂಚಾಯಿತಿ ಸಿಇಓ ಅನೀಸ್ ಕಣ್ಮಣಿ ಜಾಯ್ ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಅವರು ಭೇಟಿ ಮಾಡಿ ತಮ್ಮ ಪೌಂಡೇಷನ್ ನಿಂದ ಶಾಲೆಯ ಪ್ರಗತಿಯ ದೃಷ್ಠಿಯಿಂದ ಕ್ರೀಡಾ ಸಾಮಗ್ರಿಗಳನ್ನು ನೀಡಲಾಗಿದೆಯಲ್ಲದೆ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣೆ ಸಹ ಮಾಡಲಾಗಿದೆ . ಮುಂದಿನ ದಿನಗಳಲ್ಲಿ ರಂಗ ಚಟುವಟಿಕೆ ಸಹ ಮಾಡುವ ನಿಟ್ಟಿನಲ್ಲಿ ರಂಗ ಶಿಕ್ಷಕರನ್ನು ನೇಮಿಸುವುದಾಗಿ ತಿಳಿಸಿದರು .
ಸರ್ಕಾರಿ ಶಾಲೆಯ ಅಭಿವೃದ್ಧಿ ದೃಷ್ಠಿಯಿಂದ ತಾವೂ ಸಹ ಶಾಲೆಗೆ ಭೇಟಿ ನೀಡಿ ಸರ್ಕಾರದ ಅನುದಾನದಲ್ಲಿ ಮಾಡಬಹುದಾದ ಶಾಲೆಯ ಕಟ್ಟಡ, ಶೌಚಾಲಯ, ಕ್ರೀಡಾಂಗಣ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡಿ ಮಾದರಿ ಶಾಲೆ ನಿರ್ಮಿಸುವ ಕೆಲಸಕ್ಕೆ ನಮ್ಮೊಂದಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು .

             ಇದೇ ಸಂದರ್ಭದಲ್ಲಿ ಈ ಶಾಲೆಯಲ್ಲಿ ಈಗಾಗಲೇ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಮಾಡುವ ಕೆಲಸ ಮಾಡುತ್ತಿರುವ ಚರಕ ಚಾರಿಟಬಲ್ ಟ್ರಸ್ಟ್ ನ ಮುಖ್ಯಸ್ಥರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದರು. ಚರಕ ಟ್ರಸ್ಟ್ ನ ವೈದ್ಯರಾದ ಮಲ್ಲಿಕಾ, ಬಸವರಾಜ್, ಅರುಂಧತಿ, ಅಂಕಣಕರರಾದ ಕೆ.ಪಿ.ಸುರೇಶ್ ಉಪಸ್ಥಿತರಿದ್ಧರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap