ಹೊರಗುತ್ತಿಗೆ ಕಾರ್ಮಿಕರ ಬೇಡಿಕೆಗಳಿಗಾಗಿ ಮನವಿ

 ದಾವಣಗೆರೆ:

      ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಹೊರ ಗುತ್ತಿಗೆ ನೌಕರರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಶ್ರೀನಿವಾಸ್(ವಾಸು) ಅವರಿಗೆ ಬುಧವಾರ ನಗರದಲ್ಲಿ ಮನವಿ ಸಲ್ಲಿಸಲಾಯಿತು.

      ನಗರದ ಹೊರವಲಯದ ಸಕ್ರ್ಯೂಟ್ ಹೌಸ್‍ನಲ್ಲಿ ಸಚಿವ ಶ್ರೀನಿವಾಸ್‍ರನ್ನು ಎಐಯುಟಿಯುಸಿ ನೇತೃತ್ವದಲ್ಲಿ ಭೇಟಿ ಮಾಡಿದ್ದ ದಾವಣಗೆರೆ ವಿಶ್ವ ವಿದ್ಯಾನಿಲಯದ ಸಿ ಮತ್ತು ಡಿ ಗ್ರೂಪ್ ನೌಕರರ ಸಂಘ, ರಾಜ್ಯ ಸಂಯುಕ್ತ ಆರೋಗ್ಯ ಇಲಾಖೆ ಸಿ ಮತ್ತು ಡಿ ಗ್ರೂಪ್ ಹೊರ ಗುತ್ತಿಗೆ ನೌಕರರ ಸಂಘ, ರಾಜ್ಯ ವಿದ್ಯುತ್ ಸರಬರಾಜು ಇಲಾಖೆ ಹೊರ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಹೊರ ಗುತ್ತಿಗೆ ನೌಕರರ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ಮಂಜುನಾಥ ಕೈದಾಳೆ, ರಾಜ್ಯ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು, ತೀವ್ರ ಅನ್ಯಾಯಕ್ಕೂ ಒಳಗಾಗುತ್ತಿದ್ದಾರೆ. ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ಇಂತಹ ಹೊರ ಗುತ್ತಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇ ಕು ಎಂದು ಒತ್ತಾಯಿಸಿದರು.

      ಸಂಘಟನೆ ಮುಖಂಡರು ಹೊರ ಗುತ್ತಿಗೆ ನೌಕರರ ಸಮಸ್ಯೆಗಳನ್ನು ಮನವರಕೆ ಮಾಡಿಕೊಟ್ಟರು. ಮನವಿ ಸ್ವೀಕರಿಸಿದ ಸಚಿವ ಶ್ರೀನಿವಾಸ ಮಾತನಾಡಿ, ಹೊರ ಗುತ್ತಿಗೆ ಸಂಘಟನೆಗಳ ಕಾರ್ಮಿಕರ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಒಂದು ವೇಳೆ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಅಥವಾ ಇಲಾಖೆಗಳಿಂದ ಕಾರ್ಮಿಕರಿಗೆ ಅನ್ಯಾಯವಾಗಿದ್ದರೆ ಅಂತಹ ಮಾನವ ಸಂಪನ್ಮೂಲ ಏಜೆನ್ಸಿಗಳ ವಿರುದ್ಧ, ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ಭರವಸೆ ನೀಡಿದರು.

      ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಶಿವಾಜಿರಾವ್, ವಿವಿ ಸಂಘದ ಎಲ್.ಎಚ್.ಪ್ರಕಾಶ, ಸುಮಿತ್ರಾ, ಪುಷ್ಪಾ, ಸರ್ಕಾರಿ ಆಸ್ಪತ್ರೆ ಹೊರ ಗುತ್ತಿಗೆ ಕಾರ್ಮಿಕರ ಸಂಘದ ಮಂಜುನಾಥ ರೆಡ್ಡಿ, ಪ್ರಕಾಶ, ರಾಧಮ್ಮ, ಕೆಪಿಟಿಸಿಎಲ್ ಸಂಘದ ಶಿವಾಜಿರಾವ್, ರವಿ ಸೇರಿದಂತೆ ಹಲವರು ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link